ಈ ಭಗೀರಥ ಸಮುದಾಯ ಭವನ ನಿರ್ಮಾಣವು ಸ್ಥಳೀಯ ನಿವಾಸಿಗಳಿಗೆ ವಿವಿಧ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಹಲವು ವರ್ಷಗಳಿಂದ ಸಮುದಾಯದವರು ಭವನದ ಪೂರ್ಣಗೊಳಿಸುವಿಕೆಯನ್ನು ನಿರೀಕ್ಷಿಸುತ್ತಿದ್ದು, ಇದೀಗ ಕಾಮಗಾರಿಗೆ ಮತ್ತೆ ವೇಗ ಸಿಗುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾದ ಅನುದಾನದಡಿ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಪಟ್ಟಣದ ಕುಶಾಲನಗರ ಬಡಾವಣೆ (ವಾರ್ಡ್ ೯)ಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ೫ ಲಕ್ಷ ರುಪಾಯಿ ವೆಚ್ಚದಲ್ಲಿ ಭಗೀರಥ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮವನ್ನು ಸ್ಥಳೀಯ ಶಾಸಕ ಸಿಮೆಂಟ್ ಮಂಜು ನೆರವೇರಿಸಿದರು.

ಈ ಭಗೀರಥ ಸಮುದಾಯ ಭವನ ನಿರ್ಮಾಣವು ಸ್ಥಳೀಯ ನಿವಾಸಿಗಳಿಗೆ ವಿವಿಧ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಹಲವು ವರ್ಷಗಳಿಂದ ಸಮುದಾಯದವರು ಭವನದ ಪೂರ್ಣಗೊಳಿಸುವಿಕೆಯನ್ನು ನಿರೀಕ್ಷಿಸುತ್ತಿದ್ದು, ಇದೀಗ ಕಾಮಗಾರಿಗೆ ಮತ್ತೆ ವೇಗ ಸಿಗುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾದ ಅನುದಾನದಡಿ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸ್ಥಳೀಯರು ಸಹ ಕಾಮಗಾರಿಗೆ ಸಹಕಾರ ನೀಡಿ, ಭವನವನ್ನು ಸಮುದಾಯದ ಒಗ್ಗಟ್ಟಿನ ಸಂಕೇತವಾಗಿ ರೂಪಿಸಬೇಕೆಂದು ಕರೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಹಿರಿಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾಮಗಾರಿಯ ಯಶಸ್ಸಿಗಾಗಿ ಹಾರೈಸಿದರು.