ಸಾರಾಂಶ
ಹಿಂದುಳಿದ ಸಮುದಾಯಗಳು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ. ಆದರೆ ಕೆಲವೊಂದು ರಾಜಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಮಾತ್ರವೇ ಹಿಂದುಳಿದ ವರ್ಗದವರು ಇದ್ದಾರೆ ಎಂದು ಪ್ರತಿಬಿಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕುಬೇಂದ್ರಪ್ಪ ಹೊನ್ನಾಳಿ ಆರೋಪಿಸಿದ್ದಾರೆ.
- ಬಿಜೆಪಿ ಅಭ್ಯರ್ಥಿ ಗಾಯತ್ರಿ ಪರ ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರಚಾರ- - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಹಿಂದುಳಿದ ಸಮುದಾಯಗಳು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ. ಆದರೆ ಕೆಲವೊಂದು ರಾಜಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಮಾತ್ರವೇ ಹಿಂದುಳಿದ ವರ್ಗದವರು ಇದ್ದಾರೆ ಎಂದು ಪ್ರತಿಬಿಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕುಬೇಂದ್ರಪ್ಪ ಆರೋಪಿಸಿದರು.ತಾಲೂಕು ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕೂಡ ಎಲ್ಲ ಹಿಂದುಳಿದ, ದೀನ ದಲಿತ ಹಾಗೂ ಅಲ್ವಸಂಖ್ಯಾತ ವರ್ಗಗಳ ಜನ ಸಮುದಾಯ ಹಾಗೂ ಮುಖಂಡರನ್ನು ಹೊಂದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಕೂಡ ಹಿಂದುಳಿದ ವರ್ಗದಿಂದ ಬಂದಿರುವ ನಾಯಕ ಎಂದರು.
ಮೇ 5ರಂದು ಬೆಳಗ್ಗೆ 12 ಗಂಟೆಗೆ ಹೊನ್ನಾಳಿ- ಶಿವಮೊಗ್ಗ ಮುಖ್ಯ ರಸ್ತೆಯ ಬಿಜೆಪಿ ಚುನಾವಣಾ ಕಚೇರಿಗೆ ಹಿಂದುಳಿದ ವರ್ಗಗಳ ನಾಯಕ, ಮಾಜಿ ಸಚಿವ ಭೈರತಿ ಬಸವರಾಜ್ ಭೇಟಿ ನೀಡಿಲಿದ್ದಾರೆ. ಅವರು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ಅವಳಿ ತಾಲೂಕುಗಳ ಎಲ್ಲ ಹಿಂದುಳಿದ, ಅಲ್ಪಸಂಖ್ಯಾತರು ದೀನ, ದಲಿತ ವರ್ಗದ ಮುಖಂಡರು, ಕಾರ್ಯಕರ್ತರು, ಮತದಾರರು ಆಗಮಿಸಬೇಕು ಎಂದು ಮನವಿ ಮಾಡಿದರು.ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಜೆ.ಕೆ.ಸುರೇಶ್ ಮಾತನಾಡಿ, ಅಂದು ಮಾಜಿ ಸಚಿವ ಭೈರತಿ ಬಸವರಾಜ್ ಹಾಗೂ ಅನೇಕ ಶಾಸಕರು, ಮಾಜಿ ಸಚಿವರು, ಎಂ.ಪಿ. ರೇಣುಕಾಚಾರ್ಯರ ನೇತೃತ್ವದಲ್ಲಿ ಮತಯಾಚಿಸಿ, ಮಾತನಾಡಲಿದ್ದಾರೆ. ವಿಶೇಷವಾಗಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಭಾಗಗಳಲ್ಲಿ ಬಿಜೆಪಿಯನ್ನು ಅತ್ಯಂತ ಬಲಿಷ್ಠವಾಗಿ ಸಂಘಟಿಸುವವರಲ್ಲಿ ಹಿಂದುಳಿದ, ಅಲ್ಪಸಂಖ್ಯಾತರು, ದಲಿತ ವರ್ಗಗಳ ಬಹಳಷ್ಟು ಮುಖಂಡರು, ಕಾರ್ಯಕರ್ತರು ಇದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಾನಂದ, ಮಂಜುನಾಥ ನೆಲಹೊನ್ನೆ, ಎಂ.ಎಸ್. ಫಾಲಾಕ್ಷಪ್ಪ, ದಿಡಗೂರು ಫಾಲಾಕ್ಷಪ್ಪ, ಹತ್ತೂರು ಹನುಮಂತಪ್ಪ, ಎಸ್.ಎಸ್. ಬೀರಪ್ಪ ಅರಬಗಟ್ಟೆ ಕರಿಬಸಪ್ಪ, ಸರಳಿನಮನೆ ಮಂಜು, ಬೆನಕನಹಳ್ಳಿ ಶ್ರೀನಿವಾಸ್ ಮುಂತಾದವರು ಇದ್ದರು.- - - -4ಎಚ್.ಎಲ್.ಐ1:
ಹೊನ್ನಾಳಿ ಪಟ್ಟಣದ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಶನಿವಾರ ಬಿಜೆಪಿ ಮುಖಂಡರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.