ಸಾಮರಸ್ಯ ಬದುಕಿಗೆ ಭಜನೆಯೇ ಮೂಲ: ಮುನಿರಾಜ ರೆಂಜಾಳ

| Published : Sep 28 2024, 01:15 AM IST

ಸಾರಾಂಶ

ಕಮ್ಮಟದ ೬ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಪ್ಪುಂದ ರಾಜೇಶ್ ಪಡಿಯಾರ್, ಗಾಯಕ ರಾಮಕೃಷ್ಣ ಕಾಟುಕುಕ್ಕೆ ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಸಾಮರಸ್ಯವೇ ಬದುಕಿನ ಮೂಲ ಗುರಿಯಾಗಿದ್ದು, ಭಜನೆಗೆ ಜಾತಿ, ಮತ, ಪಂಥಗಳು ಅಡ್ಡಿಯಾಗುವುದಿಲ್ಲ. ಹಾಗಾಗಿ ಭಜನೆಯ ಮೂಲವೇ ಸಾಮರಸ್ಯ ಮೂಡಿಸುವುದು ಎಂದು ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.

ಅವರು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿದ್ದ ೨೬ನೇ ವರ್ಷದ ಭಜನಾ ತರಬೇತಿ ಕಮ್ಮಟ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಶುಕ್ರವಾರ ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ ನೀಡಿದರು.

ಕಮ್ಮಟದ ೬ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಪ್ಪುಂದ ರಾಜೇಶ್ ಪಡಿಯಾರ್, ಗಾಯಕ ರಾಮಕೃಷ್ಣ ಕಾಟುಕುಕ್ಕೆ ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು.

ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಯಂ. ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ನಡೆಯಿತು. ಯೋಗ ತರಬೇತಿಯನ್ನು ಡಾ. ಐ. ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಸೌಮ್ಯ ಸುಭಾಷ್‌ ಅವರು ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿಕೊಟ್ಟರು. ಭಜನಾ ತರಬೇತಿ ಕಮ್ಮಟದ ಶಿಬಿರಾರ್ಥಿಗಳಿಂದ ೩ನೇ ದಿನದ ನಗರ ಸಂಕೀರ್ತನೆ ಕಾರ್ಯಕ್ರಮ ನಡೆಯಿತು.

ಭಜನಾ ಕಮ್ಮಟದ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸ ರಾವ್, ರತ್ನವರ್ಮ ಜೈನ್‌ ದಿನದ ಕಾರ್ಯಕ್ರಮವನ್ನು ಸಂಘಟಿಸಿದರು. ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್‌, ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಸದಸ್ಯರಾದ ಪದ್ಮರಾಜ್ ಜೈನ್, ಪೂರ್ಣಿಮಾ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಮಹಾವೀರ ಅಜ್ರಿ, ಭವಾನಿ, ಮೋಹನ್ ಶೆಟ್ಟಿ, ಸತೀಶ್ ಪೈ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಸ್, ನಾಗೇಶ್ ಹಾಗೂ ಚೈತ್ರ ನಡೆಸಿಕೊಟ್ಟರು. ಸಮನ್ವಯಾಧಿಕಾರಿಗಳಾಗಿ ರಾಘವೇಂದ್ರ ಉಪಸ್ಥಿತರಿದ್ದರು.