ಬುಲೇರೋ- ಬೈಕ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಇಲ್ಲಿನ ಕೊತ್ತಗೆರೆ ಬಳಿ ನಡೆದಿದೆ. ಮೃತರನ್ನು ಆಕಾಶ್‌ (21) ಹಾಗೂ ಮಂಜುನಾಥ್‌ (27) ಎಂದು ಗುರುತಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕುಣಿಗಲ್

ಬುಲೇರೋ- ಬೈಕ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಇಲ್ಲಿನ ಕೊತ್ತಗೆರೆ ಬಳಿ ನಡೆದಿದೆ. ಮೃತರನ್ನು ಆಕಾಶ್‌ (21) ಹಾಗೂ ಮಂಜುನಾಥ್‌ (27) ಎಂದು ಗುರುತಿಸಲಾಗಿದೆ. ಮೃತಪಟ್ಟ ಇಬ್ಬರೂ ಕುಣಿಗಲ್ ಪಟ್ಟಣದ ವಾಸಿಗಳಾಗಿದ್ದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಹಲವಾರು ವರ್ಷಗಳಿಂದ ಸ್ನೇಹಿತರಾಗಿದ್ದು ಪ್ರತಿದಿನ ಉತ್ತಮ ಸ್ನೇಹ ಬಾಂಧವ್ಯವನ್ನು ಹೊಂದಿದ್ದರು. ಗುರುವಾರ ಸಹ ಕಾರ್ಯ ನಿಮಿತ್ತ ಇಬ್ಬರು ಸೇರಿ ತುಮಕೂರು ಮಾರ್ಗದಲ್ಲಿ ಸಂಚಿರಿಸುವ ವೇಳೆ ಈ ಅಪಘಾತ ಸಂಭವಿಸಿದೆ. ಆಕಾಶ್‌ ಸ್ಥಳದಲ್ಲಿಯೇ ಮೃತಪಟ್ಟರೆ ಹಿಂಬದಿ ಕುಳಿತಿದ್ದ ಮಂಜುನಾಥ್‌ ಅವರಿಗೆ ಕಾಲು ಮುರಿದಿತ್ತು. ಜೊತೆಗೆ ಎದೆಯ ಭಾಗದಲ್ಲಿ ತೀವ್ರ ರಕ್ತಸ್ರಾವವಾಗಿತ್ತು. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಸಹ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಣಿಗಲ್ ಶಾಸಕ ಡಾ. ರಂಗನಾಥ್, ಮಾಜಿ ಸಚಿವ ಡಿ ನಾಗರಾಜಯ್ಯ, ಬಿಜೆಪಿ ಮುಖಂಡ ಡಿ ಕೃಷ್ಣಕುಮಾರ್, ಸೇರಿದಂತೆ ಬಜರಂಗದಳದ ಪ್ರಮುಖರು ಭೇಟಿ ನೀಡಿ ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂಬಂಧ ಕುಣಿಗಲ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.