ಭಕ್ತ ಕನಕದಾಸರು ಮಹಾನ್ ದಾರ್ಶನಿಕ: ಶಾಸಕ ಜಿ.ಎಚ್.ಶ್ರೀನಿವಾಸ್

| Published : Nov 09 2025, 01:15 AM IST

ಭಕ್ತ ಕನಕದಾಸರು ಮಹಾನ್ ದಾರ್ಶನಿಕ: ಶಾಸಕ ಜಿ.ಎಚ್.ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಮಹಾನ್ ದಾರ್ಶನಿಕ, ಸಮಾಜ ಸುಧಾರಕರಾಗಿದ್ದ ಶ್ರೀ ಭಕ್ತ ಕನಕದಾಸರ ಪುತ್ಥಳಿಯನ್ನು ಸರ್ವರ ಸಹಕಾರದಿಂದ ತರೀಕೆರೆ ಪಟ್ಟಣದಲ್ಲಿ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ತರೀಕೆರೆಯಲ್ಲಿ ಶ್ರೀ ಭಕ್ತ ಕನಕದಾಸರ ಜಯಂತ್ಯುತ್ಸವ

ಕನ್ನಡಪ್ರಭ ವಾರ್ತೆ, ತರೀಕೆರೆ

ಮಹಾನ್ ದಾರ್ಶನಿಕ, ಸಮಾಜ ಸುಧಾರಕರಾಗಿದ್ದ ಶ್ರೀ ಭಕ್ತ ಕನಕದಾಸರ ಪುತ್ಥಳಿಯನ್ನು ಸರ್ವರ ಸಹಕಾರದಿಂದ ತರೀಕೆರೆ ಪಟ್ಟಣದಲ್ಲಿ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಶನಿವಾರ ತಾಲೂಕು ಆಡಳಿತ, ತಾಪಂ ಮತ್ತು ಪುರಸಭೆ ತರೀಕೆರೆ, ಶ್ರೀ ಗುರು ರೇವಣಸಿದ್ದೇಶ್ವರ ಕುರುಬರ ಸಮಾಜ ತರೀಕೆರೆ, ಕನಕ ಜಯಂತ್ಯುತ್ಸವ ಸಮಿತಿ ತರೀಕೆರೆಯಿಂದ ಪಟ್ಟಣದ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆದ ಶ್ರೀ ಭಕ್ತ ಕನಕದಾಸರ ಜಯಂತ್ಯುತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕನಕದಾಸರು ಕೀರ್ತನೆಗಳನ್ನು ಎಲ್ಲರಿಗೂ ಅರ್ಥವಾಗುವ ಹಾಗೆ ರಚಿಸಿದರು. ಅವರ ಸಮಾಜ ಮುಖಿ ಕೆಲಸದಿಂದ ಸಮಾಜ ಸುಧಾರಣೆ ಸಾಧ್ಯವಾಯಿತು ಎಂದರು.

ನಮ್ಮ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯರಾಜ್ಯಕ್ಕೆ ಒಳ್ಳೆಯ ಅಡಳಿತ ನೀಡುತ್ತಿದ್ದಾರೆ. ಅರ್ಥಿಕ ತಜ್ಞರಾಗಿರುವ ಸಿದ್ದರಾಮಯ್ಯ ಅವರು ವಿವಿಧ ಹೆಡ್ ಗಳಲ್ಲಿ ಅನುದಾನ ಮಂಜೂರು ಮಾಡಿಸಿದ್ದಾರೆ. ಪಟ್ಟಣದಲ್ಲಿ ಬಿ.ಎಚ್.ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ ಶ್ರೀ ಭಕ್ತ ಕನಕದಾಸರು ಭಕ್ತಿಯ ಶ್ರೇಷ್ಠ ಕೀರ್ತನೆಗಳ ಮೂಲಕ ಸಂದೇಶ ನೀಡಿದ್ದಾರೆ. ನಮ್ಮ ಶಾಸಕರಾದ ಜಿ.ಎಚ್.ಶ್ರೀನಿವಾಸ್ ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿ ತರೀಕೆರೆ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ಹೇಳಿದರು.

ಶ್ರೀ ಗುರು ರೇವಣಸಿದ್ದೇಶ್ವರ ಕುರುಬರ ಸಮಾಜ ಅಧ್ಯಕ್ಷ ಟಿ.ಎಸ್.ರಮೇಶ್ ಮಾತನಾಡಿ ಶ್ರೀ ಭಕ್ತ ಕನಕದಾಸರು ಎಲ್ಲ ಸಮಾಜಕ್ಕೆ ಸೇರಿದವರು. ಜಾತಿಯತೆಯನ್ನು ತಮ್ಮ ಕೀರ್ತನೆಗಳ ಮೂಲಕ ವಿರೋಧಿಸಿದರು. ಕಾರ್ಯಕ್ರಮದಲ್ಲಿ ಪ್ರತಿಭಾ ವಂತರು ಮತ್ತು ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಅರ್ಪಿಸಿದರು.

ಪುರಸಭೆ ಉಪಾಧ್ಯಕ್ಷೆ ಗೀತಾ ಗಿರಿರಾಜ್, ಕನಕಶ್ರೀ ಮಹಿಳಾ ಸಮಾಜದ ಅಧ್ಯಕ್ಷೆ ಲಕ್ಷ್ಮಿವಿಶ್ವನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್.ಅನಂತಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ, ಡಾ.ವಸಂತ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಮಾತನಾಡಿದರು.ಚಿಕ್ಕಮಗಳೂರು ಐಸಿಎಸ್.ಜೆ ಸರ್ಕಾರಿ ಕಾಲೇಜು ಅರ್ಥಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಲಕ್ಷ್ಮೀಕಾಂತ್ ಕೆ.ಎನ್. ವಿಶೇಷ ಉಪನ್ಯಾಸ ನೀಡಿದರು.

ಗೌರವ ಡಾಕ್ಟರೇಟ್ ಪುರಸ್ಕೃತ ಟಿ.ಜಿ.ಮಂಜುನಾಥ್, ಟಿ.ಎನ್.ಜಗದೀಶ್, ಟಿ.ಡಿ.ರವಿಕುಮಾರ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಡಾ.ವಸಂತ್ ಅವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಪುರಸಭೆ ಸದಸ್ಯರಾದ ಗಿರಿಜಾ ಪ್ರಕಾಶ್ ವರ್ಮ, ವಸಂತ ರಮೇಶ್, ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಧರ್ಮರಾಜ್, ಎಂ.ನರೇಂದ್ರ, ಟಿ.ಎಸ್.ಪ್ರಕಾಶ್ ವರ್ಮ, ಲಯನ್ಸ್ ಕ್ಲಬ್ ಅಧ್ಯಕ್ಷ ಟಿ.ಎಂ.ಹರೀಶ್, ಕನಕ ನೌಕರರ ಸಂಘದ ಅಧ್ಯಕ್ಷ ಬಸವರಾಜ್ತ್, ಟಿ.ಸಿ.ದರ್ಶನ್, ತಹಸೀಲ್ದಾರ್ ವಿಶ್ವಜೀತ್ ಮೇಹತಾ. ಡಿ.ವೈ.ಎಸ್.ಪಿ.ಪರುಶುರಾಮಪ್ಪ ತಾಪಂ ಇಒ ಡಾ.ಆರ್.ದೇವೇಂದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ವಿಜಯಕುಮಾರ್ ಮತ್ತಿತರರು ಭಾಗವಹಿಸಿದ್ದರು.-

8ಕೆಟಿಆರ್.ಕೆ.15ಃ

ತರೀಕೆರೆಯಲ್ಲಿ ನಡೆದ ಶ್ರೀ ಭಕ್ತ ಕನಕದಾಸರ ಜಯಂತ್ಯುತ್ಸವವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್, ಪುರಸಭೆ ಉಪಾಧ್ಯಕ್ಷೆ ಗೀತಾ ಗಿರಿರಾಜ್, ಶ್ರೀ ಗುರು ರೇವಣಸಿದ್ದೇಶ್ವರ ಕುರುಬರ ಸಮಾಜ ಅಧ್ಯಕ್ಷ ಟಿ.ಎಸ್.ರಮೇಶ್, ಉಪ ವಿಭಾಗಾಧಿಕಾರಿ ಎನ್.ವಿ.ನಟೇಶ್, ತಹಸೀಲ್ದಾರ್ ವಿಶ್ವಜೀತ್ ಮೇಹತಾ ಮತ್ತಿತರರು ಇದ್ದರು.