ಸಾರಾಂಶ
21 ವರ್ಷಗಳ ನಂತರ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ ಕಾಣಿಸಿತು. ಜಾತ್ರೆ ನಿಮಿತ್ತ ಮೂರು ದಿನಗಳ ಕಾಲ ಹೊನ್ನಾಟ ನಡೆಯುತ್ತಿದ್ದು, ಇದಕ್ಕೆ ಶನಿವಾರ ಚಾಲನೆ ದೊರೆಯಿತು.
ಧಾರವಾಡ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಮುರು ದಿನಗಳಿಂದ ಗ್ರಾಮದೇವಿ ಜಾತ್ರೆ ಸಂಭ್ರಮ ಮನೆಮಾಡಿದೆ. ಶನಿವಾರ ಗ್ರಾಮದ ಬೀದಿಗಳಲ್ಲಿ ನಡೆದ ಹೊನ್ನಾಟ ಇಡೀ ಗ್ರಾಮವನ್ನು ಭಂಡಾರಮಯಗೊಳಿಸಿತು. ಮಹಿಳೆಯರು, ಪುರುಷರು, ವೃದ್ಧರು, ಮಕ್ಕಳು, ಯುವಕರು ಬೇಧಭಾವ ಇಲ್ಲದೆ ಸಡಗರದಲ್ಲಿ ಪಾಲ್ಗೊಂಡು ಗಮನ ಸೆಳೆದರು. 21 ವರ್ಷಗಳ ನಂತರ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ ಕಾಣಿಸಿತು. ಜಾತ್ರೆ ನಿಮಿತ್ತ ಮೂರು ದಿನಗಳ ಕಾಲ ಹೊನ್ನಾಟ ನಡೆಯುತ್ತಿದ್ದು, ಇದಕ್ಕೆ ಶನಿವಾರ ಚಾಲನೆ ದೊರೆಯಿತು. ಗ್ರಾಮದೇವಿಯರ ಮೂರ್ತಿಗಳೊಂದಿಗೆ ಮೆರವಣಿಗೆ ಹೊರಟಾಗ ಜನ ಭಂಡಾರ, ಹೂವುಗಳನ್ನು ತೂರಿ ಸ್ವಾಗತಿಸಿದರು. ಇದೇ ರೀತಿ ಭಾನುವಾರ ಹಾಗೂ ಸೋಮವಾರ ಕೂಡ ಹೊನ್ನಾಟ ನಡೆಯಲಿದ್ದು, ನಂತರ ದೇವಿಯರನ್ನು ಊರ ಅಗಸಿಯಲ್ಲಿ ಪ್ರತಿಷ್ಠಾಪನೆಗೊಳಿಸಲಾಗುವುದು.