ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಮಂಚಲದೊರೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಎಲ್ಲಾ 38 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇಕಡ 100ರ ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ ಭಾನುಪ್ರೀಯ 580 , ಅಂಜನ್ ಮೂರ್ತಿ 575 , ನಿರ್ಮಾಲ 554 ಅಂಕಗಳನ್ನು ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಪವಿತ್ರ 550 ಅಂಕಗಳನ್ನು ಗಳಿಸಿ ಕಾಲೇಜಿ ಕೀರ್ತಿ ತಂದ್ದಿದಾರೆ. ಕಲಾ ವಿಭಾಗದಲ್ಲಿ ಡಿಸ್ಟಿಂಕ್ಷನ್ 2. ಪ್ರಥಮ ದರ್ಜೆ 28 ದ್ವಿತೀಯ ದರ್ಜೆ 3 ಮತ್ತು ಒಬ್ಬರು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಂಬತ್ತು ವಿದ್ಯಾರ್ಥಿಗಳ ಪೈಕಿ ಡಿಸ್ವಿಂಕ್ಷನ್ ಮೂರು ಪ್ರಥಮ ದರ್ಜೆಯಲ್ಲಿ 6 ವಿದ್ಯಾರ್ಥಿಗಳು ಉತ್ತೀರ್ಣ ಆಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಶೇ100 ಫಲಿತಾಂಶ ಸಿಕ್ಕ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಮಂಜುನಾಥ್ ಅಭಿನಂದಿಸಿದ್ದಾರೆ. ಆದರಲ್ಲೂ ಗಡಿ ಭಾಗದಲ್ಲಿ ಇರುವ ಮಂಚಲದೊರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 100ಫಲಿತಾಂಶ ಸಿಕ್ಕಿರುವುದು ಸಂತಸ ತಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಗಡಿ ಭಾಗದ ಪ್ರದೇಶದಲ್ಲಿ ಇರುವ ಕಾಲೇಜಿಗೆ ಇಲಾಖೆ ಗುರುತಿಸಿ ಮತ್ತಷ್ವು ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ ಮತ್ತೆ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.ಮಂಚಲದೊರೆ ಸರ್ಕಾರಿ ಕಾಲೇಜಿಗೆ 100 ರಷ್ಟು ಫಲಿತಾಂಶ
ತಾಲೂಕಿನ ಮಂಚಲದೊರೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಎಲ್ಲಾ 38 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇಕಡ 100ರ ಫಲಿತಾಂಶ ಪಡೆದಿದೆ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.