ಸಾರಾಂಶ
ಎಸ್‌ಐಟಿ ತನಿಖೆ ಪಾರದರ್ಶಕವಾಗಿ ಯಾರ ಒತ್ತಡ ಇಲ್ಲದೆ ನಡೆಯಬೇಕು.
ಕನ್ನಡಪ್ರಭ ವಾರ್ತೆ ಮೈಸೂರು
ಸೌಜನ್ಯ ಸಾವಿಗೆ ನ್ಯಾಯ ಕೊಡಬೇಕು ಹಾಗೂ ಹಲವಾರು ಹೆಣ್ಣು ಮಕ್ಕಳ ಸಾವಿನ ಕುರಿತು ಪಾರದರ್ಶಕ ತನಿಖೆಗೆ ಆಗ್ರಹಿಸಿ ಭಾರತ ಭೀಮ್ ಸೇನೆ ಜಿಲ್ಲಾ ಸಮಿತಿಯವರು ನಗರದ ಪುರಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ಪಾದಯಾತ್ರೆ ಹಮ್ಮಿಕೊಂಡಿದ್ದರು.ಎಸ್‌ಐಟಿ ತನಿಖೆ ಪಾರದರ್ಶಕವಾಗಿ ಯಾರ ಒತ್ತಡ ಇಲ್ಲದೆ ನಡೆಯಬೇಕು. ಸೌಜನ್ಯ ಸಾವಿಗೆ ನ್ಯಾಯ ಕೊಡಿಸಬೆಕು ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ನಟ ಅಹಿಂಸಾ ಚೇತನ್ ಮಾತನಾಡಿ, ಧರ್ಮಸ್ಥಳದ ಸೌಜನ್ಯಳ ಸಾವಿಗೆ ನ್ಯಾಯ ಕೊಡಿಸಲೆಂದು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದರು ಇನ್ನೂ ನ್ಯಾಯ ಸಿಕ್ಕಿಲ್ಲ. ಇದೀಗ ಮತ್ತೆ ಹೋರಾಟ ಆರಂಭವಾಗಿದೆ. ಸಂಘಟನಾತ್ಮಕ ಹೋರಾಟದ ಮೂಲಕ ನ್ಯಾಯ ಕೊಡಿಸಬೇಕು. ಕೂಡಲೇ ಸರ್ಕಾರ ಸೂಕ್ತ ತನಿಖೆ ನಡೆಸಿ ಸೌಜನ್ಯ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು. ಮಾಜಿ ಮೇಯರ್ ಪುರುಷೋತ್ತಮ್, ಭಾರತ ಭೀಮ್ ಸೇನೆಯ ರಾಜ್ಯಾಧ್ಯಕ್ಷ ದಿನೇಶ್, ಜಿಲ್ಲಾಧ್ಯಕ್ಷ ಯಶ್ವಂತ್, ಮುಖಂಡರಾದ ನಾಗೇಶ್, ಬಸವಣ್ಣ, ರವಿಕುಮಾರ್, ಮಹೇಶ್ ಮೊದಲಾದವರು ಇದ್ದರು.