ಬಿಜೆಪಿಗೆ ಈ ಬಾರಿ 400 ಸ್ಥಾನ ಖಚಿತ-ಭರತ ಬೊಮ್ಮಾಯಿ

| Published : Apr 14 2024, 01:48 AM IST

ಸಾರಾಂಶ

ಸೋಲಿನ ಭಯದಲ್ಲಿರುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಯ ಬಿಡುತ್ತಿದೆ. ದೇಶದ ಪ್ರಜೆಗಳು ಇಂತಹವುಗಳನ್ನು ನಂಬುವಷ್ಟು ಮೂರ್ಖರಲ್ಲ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭರತ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಬ್ಯಾಡಗಿ: ಸೋಲಿನ ಭಯದಲ್ಲಿರುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಯ ಬಿಡುತ್ತಿದೆ. ದೇಶದ ಪ್ರಜೆಗಳು ಇಂತಹವುಗಳನ್ನು ನಂಬುವಷ್ಟು ಮೂರ್ಖರಲ್ಲ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭರತ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ವಿವಿಧೆಡೆ ತಂದೆ ಹಾಗೂ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರದ ವೇಳೆ ಅವರು ಮಾತನಾಡಿದರು, ಸುಳ್ಳುಗಳನ್ನೇ ಹೇಳಿಕೊಂಡು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ 6 ದಶಕಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ನಮ್ಮ ದೇಶದ ಇಂತಹ ದುಸ್ಥಿಗೆ ಬರಲು ನೇರ ಕಾರಣವಾಗಿದ್ದಾರೆ ಎಂದು ಆರೋಪಿಸಿದರು.200 ಕ್ಷೇತ್ರದಲ್ಲಿ ಸ್ಪರ್ಧೆ: ದೇಶದಲ್ಲಿ ಸರಳ ಬಹುಮತಕ್ಕೆ 272 ಸ್ಥಾನಗಳನ್ನು ಗೆಲ್ಲಲೇಬೇಕು ಆದರೆ ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿರುವುದು ಕೇವಲ 235 ಸ್ಥಾನಕ್ಕೆ ಮಾತ್ರ, ಹಾಗಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲಿ ಜಯ ಸಾಧಿಸಿದರೂ ಕಾಂಗ್ರೆಸ್‌ಗೆ ಬಹುಮತ ಸಿಗಲ್ಲ, ಇಂಡಿಯಾ ಎಂಬ ಭ್ರಷ್ಠರ ಒಕ್ಕೂಟವು ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಲು ಬಿಡುವುದಿಲ್ಲ ಹೀಗಿದ್ದರೂ ಸುಳ್ಳು ಭರವಸೆ ನೀಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹಗಲು ಗನಸು ಕಾಣುತ್ತಿದೆ ಎಂದು ಲೇವಡಿ ಮಾಡಿದರು.

ಈ ವೇಳೆ ಜಿಪಂ.ಮಾಜಿ ಸದಸ್ಯ ವಿರೂಪಾಕ್ಷಪ್ಪ ಕಡ್ಲಿ, ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ. ಛತ್ರದ, ಮಾಜಿ ತಾಲೂಕಾಧ್ಯಕ್ಷ ಹಾಲೇಶ ಜಾಧವ, ಎಸ್ಸಿ ಘಟಕದ ಉಪಾಧ್ಯಕ್ಷ ನಾಗರಾಜ ಹಾವನೂರ, ಮುಖಂಡರಾದ ಭಾರತಿ ಜಂಬಗಿ, ಶಿವಬಸಪ್ಪ ಕುಳೇನೂರ, ನಾಗರಾಜ ಬಳ್ಳಾರಿ, ಶಂಕ್ರಣ್ಣ ಮಾತನವರ, ಸುರೇಶ ಯತ್ನಳ್ಳಿ, ಪುರಸಭೆ ಸದಸ್ಯರಾದ ಸುಭಾಸ ಮಾಳಗಿ, ವಿನಯ ಹಿರೇಮಠ, ನಿಂಗಪ್ಪ ಬಟ್ಟಲಕಟ್ಟಿ, ವಿಜಯಭರತ ಬಳ್ಳಾರಿ, ಸುರೇಶ ಉದ್ಯೋಗಣ್ಣನವರ, ಮಂಜುನಾಥ ಜಾಧವ ಇನ್ನಿತರರಿದ್ದರು.