ಸಾರಾಂಶ
ಕೇಂದ್ರ ಸರ್ಕಾರ ಸದಾ ರೈತರ ಮತ್ತು ಕಡು ಬಡವರ ಹಿತ ಕಾಯಲು ಬದ್ಧವಾಗಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂತಹ ಐತಿಹಾಸಿಕ ಕ್ರಮ ಕೈಗೊಂಡಿದೆ.
ಹುಬ್ಬಳ್ಳಿ:
ಬೆಲೆ ಏರಿಕೆ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.ನಗರದ ಮೂರುಸಾವಿರ ಮಠದ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಬಳಿಕ ಆಹಾರ ಧಾನ್ಯದ ಕಿಟ್ ವಿತರಿಸಿ ಮಾತನಾಡಿ, ಕೇಂದ್ರ ಸರ್ಕಾರ ಸದಾ ರೈತರ ಮತ್ತು ಕಡು ಬಡವರ ಹಿತ ಕಾಯಲು ಬದ್ಧವಾಗಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂತಹ ಐತಿಹಾಸಿಕ ಕ್ರಮ ಕೈಗೊಂಡಿದೆ ಎಂದರು.
ಈಗಾಗಲೇ ದೆಹಲಿ, ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿ ಭಾರತ್ ಬ್ರಾಂಡ್ ಅಡಿ ಆಹಾರಧಾನ್ಯ ವಿತರಣೆಗೆ ಕ್ರಮ ಕೈಗೊಂಡಿದ್ದು, ಈಗ ಹು-ಧಾ ಮಹಾ ನಗರ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ವಾಹನಗಳಲ್ಲಿ ಕಡಿಮೆ ಬೆಲೆಯಲ್ಲಿ ಭಾರತ್ ಬ್ರಾಂಡ್ ಆಹಾರ ದಾನ್ಯ ವಿತರಿಸಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಪ್ರಭು ನವಲಗುಂದಮಠ, ರವಿ ನಾಯಕ, ಲಕ್ಷ್ಮೀಕಾಂತ ಘೋಡ್ಕೆ ಸೇರಿದಂತೆ ಹಲವರಿದ್ದರು.