ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದು ಬಿಜೆಪಿ: ಗೋವಿಂದ ಕಾರಜೋಳ

| Published : Apr 11 2024, 12:51 AM IST

ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದು ಬಿಜೆಪಿ: ಗೋವಿಂದ ಕಾರಜೋಳ
Share this Article
  • FB
  • TW
  • Linkdin
  • Email

ಸಾರಾಂಶ

ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ, ಶಿರಾ ಭಾಗದ ಜನ ಸಾಮಾನ್ಯರ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನೀಗಿಸಬೇಕು ಎಂಬ ಉದ್ದೇಶದಿಂದ ಅಪ್ಪರ್‌ ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ, ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರ ಮಾನ್ಯ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ, ಶಿರಾ ಭಾಗದ ಜನ ಸಾಮಾನ್ಯರ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನೀಗಿಸಬೇಕು ಎಂಬ ಉದ್ದೇಶದಿಂದ ಅಪ್ಪರ್‌ ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ, ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರ ಮಾನ್ಯ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರು ಗುಂಡ ಬ್ರಹ್ಮೇಶ್ವರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಚನ ಪಡೆದು ಮಾತನಾಡಿದರು. ಅಪ್ಪರ್ ಭದ್ರಾ ಯೋಜನೆಗೆ ೨೫೦೦ ಕೋಟಿ ರೂಪಾಯಿ ಮೀಸಲಿಟ್ಟಿದ್ದರು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಬಿಡುಗಡೆ ಮಾಡಿಸುವಂತಹ ಇಚ್ಛಾಶಕ್ತಿಯನ್ನು ಪ್ರದರ್ಶಿಸದ ಕಾರಣ ಅಪ್ಪರ್ ಭದ್ರ ಯೋಜನೆ ಕಾಮಗಾರಿ ಆಮೆಗತೆಯಲ್ಲಿ ಸಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಮತ ಕೊಟ್ಟು ಜಯಶೀಲರನ್ನಾಗಿ ಮಾಡಿ ಕಳಿಸಿದರೆ, ಅಪ್ಪರ್‌ ಭದ್ರ ಯೋಜನೆ ಕೆಲಸಕ್ಕೆ ನಿಗದಿಯಾಗಿರುವ ೫೩೦೦ ಕೋಟಿ ರೂಪಾಯಿ ಬಿಡುಗಡೆ ಮಾಡಿಸುವುದೇ ನನ್ನ ಮೊದಲ ಆದ್ಯತೆ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಆನೆ ಬಲ ನೀಡಿದ್ದು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಂಬ ಎರಡು ದೈತ್ಯ ಶಕ್ತಿ ಮುಂದೆ ಕಾಂಗ್ರೆಸ್ ಪಕ್ಷದ ಆಟ ನಡೆಯುವುದಿಲ್ಲ. ದೇಶದ ರಕ್ಷಣೆ, ಸುಭದ್ರತೆ , ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಮುನ್ನಡೆಸುತ್ತಿರುವ ನರೇಂದ್ರ ಮೋದಿಯವರ ಆಡಳಿತ ವೈಖರಿ ಪ್ರತಿಯೊಬ್ಬರಿಗೂ ಬೇಕಾಗಿದ್ದು ರಾಜ್ಯದಲ್ಲಿ ಈ ಬಾರಿ ೨೮ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ವಿಜಯ ಸಾಧಿಸುವ ವಿಶ್ವಾಸವಿದೆ ಎಂದರು.ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಹೊರಗಿನವರು ಎಂಬ ಕಾಂಗ್ರೆಸ್ ಟೀಕೆಗೆ ಉತ್ತರಿಸಿದ ಕಾರಜೋಳ, ಸಿದ್ದರಾಮಯ್ಯರನ್ನು ಬಾಗಲಕೋಟೆ ಜಿಲ್ಲೆಯವರು ಮತ ನೀಡಿ ಗೆಲ್ಲಿಸಿದ್ದರು ಎಂಬುದನ್ನು ಮರೆಯಬಾರದು. ಅಲ್ಲಿ ಅವರು ಹೊರಗಿನವರಾಗಿದ್ದರಾ ಎಂದು ತಿರುಗೇಟು ನೀಡಿದರು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ರವರು, ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿ ಆಗಿದ್ದಾಗ ಉತ್ತರ ಕರ್ನಾಟಕಕ್ಕೆ ನೀಡಿದ ಕೊಡುಗೆ ಅಪಾರ ಸಾಮಾಜಿಕ ಬದ್ಧತೆಯುಳ್ಳ ಏಕೈಕ ಹಿರಿಯ ರಾಜಕಾರಣಿ ಹೆಚ್. ಡಿ .ದೇವೇಗೌಡ ಎಂದರು.

ಜೆಡಿಎಸ್ ಹಿರಿಯ ಮುಖಂಡ ಆರ್.ಉಗ್ರೇಶ್ ಮಾತನಾಡಿ, ದೇಶದ ಹಿತ ದೃಷ್ಟಿಯಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿದ್ದು, ಜೆಡಿಎಸ್ ಕಾರ್ಯಕರ್ತರು ಎಚ್. ಡಿ. ಕುಮಾರಸ್ವಾಮಿ ಕೈಬಲ ಪಡಿಸುವ ನಿಟ್ಟಿನಲ್ಲಿ ಲೋಕಸಭಾ ಚುನಾವಣೆ ಯಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳರವರಿಗೆ ಹೆಚ್ಚು ಮತಗಳನ್ನು ಹಾಕಿಸುವ ಮೂಲಕ ಮೈತ್ರಿಕೂಟದ ಅಭ್ಯರ್ಥಿಗೆ ಹೆಚ್ಚು ಮತ ಬರುವಂತೆ ಸಂಕಟನಾತ್ಮಕವಾಗಿ ಕೆಲಸ ಮಾಡಬೇಕು ಎಂದು ಜೆಡಿಎಸ್ ಕಾರ್ಯಕರ್ತರಿಗೆ ಕರೆ ನೀಡಿದರು. ಮುಖಂಡ ಮದಲೂರು ನರಸಿಂಹಮೂರ್ತಿ, ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಡಿ .ಮಲ್ಲೇಶ್, ಹೊಸಮನೆ ರಂಗನಾಥ್, ತಾಲೂಕು ಪಂಚಾಯತಿ ಮಾಜಿ ಸದಸ್ಯ ಕೆ.ಎಂ. ಶ್ರೀನಿವಾಸ್, ಬಿಜೆಪಿ ನಗರ ಅಧ್ಯಕ್ಷ ಗಿರಿಧರ, ಗ್ರಾಪಂ ಸದಸ್ಯ ಚಂದ್ರಕುಮಾರ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.