ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿ ಸಂಘವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ 15 ಜನ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಚಿ ಹಾಗೂ 12 ಜನರ ಕಾರ್ಯಕಾರಿ ಸದಸ್ಯರು ಇರಲಿದ್ದಾರೆ, ಮೀಸಲಾತಿಗೆ ಅನುಗುಣವಾಗಿ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಹೇಳಿದರು.
ಉಡುಪಿ: ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿ ಸಂಘವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ 15 ಜನ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಚಿ ಹಾಗೂ 12 ಜನರ ಕಾರ್ಯಕಾರಿ ಸದಸ್ಯರು ಇರಲಿದ್ದಾರೆ, ಮೀಸಲಾತಿಗೆ ಅನುಗುಣವಾಗಿ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಹೇಳಿದರು.
ಭಾರತ್ ಜೋಡೊ ಯುವ ಸಂಘದ ಮಾರ್ಗದರ್ಶಕರಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದರು.ಮಾರ್ದದರ್ಶಕರ ಜವಾಬ್ದಾರಿ: ಎಲ್ಲ ಗ್ರಾಪಂ ಹಾಗೂ ನಗರದ ವಾರ್ಡುಗಳ ವ್ಯಾಪ್ತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸಂಘ ಸ್ಥಾಪಿಸಲಾಗುವುದು, ಈ ಸಂಘಗಳ ನೋಂದಣಿ ಮಾಡುವಲ್ಲಿ ಮಾರ್ಗದರ್ಶಕರ ಜವಾಬ್ದಾರಿ ಹೆಚ್ಚಿದೆ. ಪ್ರತಿ ಯುವ ಸಂಘವೂ ಸರ್ಕಾರದ ಮಾರ್ಗಸೂಚಿ ಅನ್ವಯ ನೋಂದಣಿ ಆಗುವಂತೆ ಅಗತ್ಯ ಕ್ರಮ ವಹಿಸಬೇಕು, ಈ ಎಲ್ಲಾ ಕಾರ್ಯಗಳನ್ನು ತಹಸೀಲ್ದಾರರು ಮೇಲ್ವಿಚಾರಣೆ ಮಾಡಬೇಕು ಎಂದರು.
ಜಿಲ್ಲಾ ಸಂಯೋಜಕ ಡಾ. ಗಣನಾಥ್ ಶೆಟ್ಟಿ ಎಕ್ಕಾರು ಮಾತನಾಡಿದರು ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ತಹಸೀಲ್ದಾರ್ ಅನಂತ ಶಂಕರ್ ಬಿ., ರಾಕೇಶ್ ಫ್ರಾನ್ಸಿಸ್ ವಿಕ್ಟರ್ ಹಾಗೂ ಅಶೋಕ್ ಭಟ್, ಮಾಸ್ಟರ್ ಟ್ರೈನರ್ಸ್ ಹಾಗೂ ಮೆಂಟರ್ಸ್ ಇದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ನಿರೂಪಿಸಿದರು.