ಸಾರಾಂಶ
ನಾಲ್ಕು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ
ಮೈಸೂರು
ಆಂಧ್ರ ಪ್ರದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಜಗನ್ನಾಥ ರಥ ಯಾತ್ರೆಯಲ್ಲಿ ಮೈಸೂರಿನ ನೃತ್ಯ ಸಂಸ್ಥೆಯಾದ ಕುಮಾರ್ ಪ್ರದರ್ಶಕ ಕಲೆಗಳ ಕೇಂದ್ರದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಾಲ್ಕು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಅದ್ಧೂರಿಯಾಗಿ ನೆರವೇರಿತು. ಕೇಂದ್ರದ ನಿರ್ದೇಶಕ ಡಾ.ಕೆ. ಕುಮಾರ್ ಅವರ ನೇತೃತ್ವದಲ್ಲಿ ಮೈಸೂರಿನ ವಿದ್ಯಾರ್ಥಿಗಳು ವಿಶೇಷವಾಗಿ ಭರತನಾಟ್ಯ ಪ್ರದರ್ಶಿಸಿ, ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದರು. ಡಾ ಕೆ. ಕುಮಾರ್ ಅವರು ಆಹ್ವಾನಿತರಾಗಿ ನೃತ್ಯ ಕಾರ್ಯಕ್ರಮವನ್ನು ಸಾದರಪಡಿಸಿದರು.