ಸಾರಾಂಶ
ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾರತಿ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾದರು.ಗ್ರಾಪಂನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಸದಸ್ಯರ ಒಡಂಬಡಿಕೆಯಂತೆ ಹಿಂದಿನ ಅಧ್ಯಕ್ಷ ಕೆ.ಆರ್.ಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಭಾರತೀ ಪ್ರಕಾಶ್ ಹೊರತು ಪಡಿಸಿ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿ ಸಿಡಿಪಿಒ ಅರುಣ್‌ಕುಮಾರ್, ಸಹಚುನಾವಣಾಧಿಕಾರಿ ತಾಪಂ ವ್ಯವಸ್ಥಾಪಕ ಅನಿಲ್‌ಬಾಬು, ಪಿಡಿಒ ಚಲುವರಾಜು ಕಾರ್ಯ ನಿರ್ವಹಿಸಿದರು.ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್. ಪ್ರಭಾಕರ್, ಗ್ರಾಪಂ ಉಪಾಧ್ಯಕ್ಷೆ ರೇಣುಕಮ್ಮ, ಮುಖಂಡರಾದ ಐಕನಹಳ್ಳಿ ಕೃಷ್ಣೇಗೌಡ, ಕಾಯಿ ಮಂಜೇಗೌಡ, ಶೇಖರ್, ರವಿ, ಸದಸ್ಯರಾದಎಸ್.ಕೆ.ಬಾಲಕೃಷ್ಣ, ಕೆ.ಆರ್.ರಾಜೇಶ್, ಕೆ.ಬಿ. ಚಂದ್ರಶೇಖರ್, ಕೆ.ಆರ್. ಕೃಷ್ಣ, ಕೆ.ಜಿ.ಪುಟ್ಟರಾಜು, ಸರಸ್ವತಿ ಗೋವಿಂದರಾಜು, ಗ್ರಾಮ ಮುಖಂಡರು ಭಾಗವಹಿಸಿದ್ದರು.
ವಕ್ಫ್ ತಿದ್ದುಪಡಿ ವಿರೋಧಿಸಿ ನಾಳೆ ಪ್ರತಿಭಟನೆಕನ್ನಡಪ್ರಭ ವಾರ್ತೆ ಮಂಡ್ಯ
ವಕ್ಫ್ ಕಾನೂನು ತಿದ್ದುಪಡಿ ವಿರೋಧಿಸಿ ಮೇ ೨೪ರಂದು ಮಧ್ಯಾಹ್ನ ೩ ಗಂಟೆಗೆ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಎಸ್‌ಡಿಪಿಐ ಸಂಘಟನೆಎಯ ತಾಹೀರ್ ಹೇಳಿದರು.ಅಂದು ಮಧ್ಯಾಹ್ನ ೩ ಗಂಟೆಗೆ ನಗರದ ಮೈಷುಗರ್ ವೃತ್ತದ ಬಳಿ ವಕ್ಫ್ ಕಾನೂನು ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿಭಟನೆಯಲ್ಲಿ ಜಾಗೃತ ಕರ್ನಾಟಕ ರಾಜ್ಯ ಮುಖಂಡ ಡಾ..ವಾಸು, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕೆಪಿಸಿಸಿ ಮಹಿಳಾ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ನಜ್ಮಾ ನಜೀರ್, ಇಫ್ತೆಖಾರ್ ಅಹಮದ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಸುದ್ದಿಗಾರರಿಗೆ ತಿಳಿಸಿದರು.ವಕ್ಫ್ ಕಾಯ್ದೆ ತಿದ್ದುಪಡಿ ಭಾರತೀಯ ಮುಸಲ್ಮಾನರ ಮೇಲೆ ನಡೆಸಿರುವ ದಬ್ಬಾಳಿಕೆಯಾಗಿದೆ. ಮಸೀದಿಗಳು, ದರ್ಗಾಗಳು, ಈದ್ಗಾಗಳು, ಖಬರಸ್ತಾನ್‌ಗಳು ಮತ್ತು ವಕ್ಫ್‌ಗೆ ಸೇರಿದ ಜಾಗಗಳನ್ನು ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮಾಡಿರುವ ಕುತಂತ್ರದ ಭಾಗವಾಗಿದೆ ಎಂದು ಆರೋಪಿಸಿದರು.
ಗೋಷ್ಠಿಯಲ್ಲಿ ಮುಕ್ತಾರ್ ಅಹಮದ್, ಮೌಲಾನಾ ಅಹಮದುಲ್ಲಾ ರಸಾನಿ, ನಹೀಂಖಾನ್, ಜಬೀವುಲ್ಲಾಖಾನ್, ಮಹಮದ್ ಖಾಸಿಂ, ಖಲೀಂವುಲ್ಲಾ ಇದ್ದರು.