ಅಧ್ಯಕ್ಷರಾಗಿ ಭಾರತಿ ರವಿಕುಮಾರ್ ಆಯ್ಕೆ

| Published : Nov 17 2025, 12:30 AM IST

ಸಾರಾಂಶ

ಈ ಹಿಂದಿನ ಅಧ್ಯಕ್ಷೆ ಜಲಜಾಕ್ಷಿ ಚಂದ್ರು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಭಾರತಿ ರವಿಕುಮಾರ್ ಹಾಗೂ ಜಯರಾಮ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ರವೀಂದ್ರಕುಮಾರ್ ಹೊರತುಪಡಿಸಿ ಮತ್ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಪಂಚಾಯ್ತಿ ಇಒ ಹರೀಶ್ ಅವಿರೋಧ ಆಯ್ಕೆ ಪ್ರಕಟಿಸಿದರು. ಬಸ್ತಿಹಳ್ಳಿ ಗ್ರಾಮದ ಭಾರತಿ ರವಿಕುಮಾರ್ ಅಧ್ಯಕ್ಷರಾಗಿ, ರವೀಂದ್ರಕುಮಾರ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಚನ್ನರಾಯಪಟ್ಟಣ: ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಸ್ತಿಹಳ್ಳಿ ಗ್ರಾಮದ ಭಾರತಿ ರವಿಕುಮಾರ್ ಅಧ್ಯಕ್ಷರಾಗಿ, ರವೀಂದ್ರಕುಮಾರ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದಿನ ಅಧ್ಯಕ್ಷೆ ಜಲಜಾಕ್ಷಿ ಚಂದ್ರು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಭಾರತಿ ರವಿಕುಮಾರ್ ಹಾಗೂ ಜಯರಾಮ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ರವೀಂದ್ರಕುಮಾರ್ ಹೊರತುಪಡಿಸಿ ಮತ್ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಪಂಚಾಯ್ತಿ ಇಒ ಹರೀಶ್ ಅವಿರೋಧ ಆಯ್ಕೆ ಪ್ರಕಟಿಸಿದರು.ನೂತನವಾಗಿ ಆಯ್ಕೆಯಾದ ಭಾರತಿ ರವಿಕುಮಾರ್ ಹಾಗೂ ರವಿಂದ್ರಕುಮಾರ್ ಎಲ್ಲ ಸದಸ್ಯರಿಗೆ ಧನ್ಯವಾದ ಸಲ್ಲಿಸಿ ಮಾತನಾಡಿ, ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇವೆ. ಎಲ್ಲಾ ಸದಸ್ಯರ ಪರಸ್ಪರ ಸಹಕಾರದಿಂದ ಉತ್ತಮ ಕೆಲಸ ನಿರ್ವಹಿಸುವುದರೊಂದಿಗೆ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇವೆ. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಬೀದಿದೀಪ, ಒಳಚರಂಡಿ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿಪಡಿಸಲು ನಾವು ಬದ್ಧರಾಗಿದ್ದು, ಗ್ರಾಮಾಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎನ್.ಲವಣ್ಣ ಮಾತನಾಡಿ, ಈ ಪಂಚಾಯ್ತಿ ವ್ಯಾಪ್ತಿಯ ಹತ್ತು ಗ್ರಾಮಗಳ 14 ಸದಸ್ಯರು ಒಗ್ಗಟ್ಟಿನಿಂದ ಅಭಿವೃದ್ಧಿಗೆ ಶ್ರಮಿಸಿದ್ದು, ಮುಂದೆಯೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಬೆಂಬಲ ನೀಡಿ, ಗ್ರಾಮೋದ್ಧಾರ, ಬೀದಿದೀಪ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಹಳ್ಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಸದಸ್ಯರಾದ ಕೇಶವಮೂರ್ತಿ, ರಂಗೇಗೌಡ, ಜಯರಾಮ್, ನೂತನ್, ಮಂಜಮ್ಮ ಕೃಷ್ಣೇಗೌಡ, ಸಾವಿತ್ರಮ್ಮ, ಲತಾ ತಮ್ಮಯ್ಯ, ಪ್ರೀತಿ ಚೇತನ್, ಪೃಥ್ವಿರಾಣಿ ಶಿವಪ್ಪ, ಜಯಲಕ್ಷ್ಮಿ ಪ್ರಸನ್ನ ಕುಮಾರ್ ಇದ್ದರು.