ಸಾರಾಂಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ 5, 8 ಮತ್ತು 9 ನೇ ತರಗತಿಗಳ ಪರೀಕ್ಷೆಗಳನ್ನು ರಜೆ ದಿನಗಳಲ್ಲಿ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಸಲಹೆ ನೀಡಿದ್ದಾರೆ.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5, 8 ಮತ್ತು 9 ನೇ ತರಗತಿಯ ಪರೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯಕ್ಕೆ ಮನವರಿಕೆ ಮಾಡಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ ಎಂದರು.ಇಂದಿನಿಂದ ಎಸ್ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಇದೇ ಸಮಯದಲ್ಲಿ 5, 8 ಮತ್ತು 9 ನೇ ತರಗತಿಗಳ ಪರೀಕ್ಷೆಗಳು ಕೂಡ ನಡೆಸಲಾಗುತ್ತಿದೆ. ಇದರಿಂದ ಶಿಕ್ಷಕರ ಮೇಲೆ ಒತ್ತಡ ಹೆಚ್ಚಾಗಲಿದೆ. ಇದರ ನಡುವೆ ಲೋಕಸಭೆ ಚುನಾವಣೆ ತರಬೇತಿ ಯನ್ನು ಶಿಕ್ಷಕರಿಗೆ ನೀಡಲಾಗುತ್ತಿದೆ. ಈ ಎಲ್ಲದರ ಬಗ್ಗೆ ಆಲೋಚನೆ ಮಾಡಬೇಕು ಎಂದ ಅವರು, ರಜೆ ದಿನಗಳಲ್ಲಿ ಪರೀಕ್ಷೆ ನಡೆಸುವ ಮೂಲಕ ಶಿಕ್ಷಣ ಇಲಾಖೆಯಲ್ಲಿನ ಗೊಂದಲದ ವಾತಾವರಣ ತಿಳಿಗೊಳಿಸಬೇಕು ಎಂದು ಹೇಳಿದರು.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಅಭ್ಯರ್ಥಿ ಗಳ ಗೆಲುವಿಗೆ ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬದ್ಧರಾಗಿದ್ದಾರೆ. ತಾವು ಈಗಾಗಲೇ ಉಡುಪಿ- ಚಿಕ್ಕ ಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವುದಾಗಿ ಹೇಳಿದರು.ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲಬೇಕು. ನರೇಂದ್ರಮೋದಿಯವರು ಮತ್ತೆ ಪ್ರಧಾನಿ ಯಾಗಬೇಕೆಂಬುದು ನಮ್ಮ ಗುರಿ. ಆ ನಿಟ್ಲಿನಲ್ಲಿ ಚುನಾವಣಾ ಸಂದರ್ಭದಲ್ಲಿ ಕೆಲಸ ಮಾಡಲಾಗುವುದು. ಉಡುಪಿ- ಚಿಕ್ಕ ಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್, ಸಿ.ಕೆ ಮೂರ್ತಿ, ಎ.ಸಿ. ಕುಮಾರಗೌಡ, ಲಕ್ಷ್ಮಣ, ಇರ್ಷಾದ್ ಅಹಮದ್, ದೇವಿಪ್ರಸಾದ್ ಇದ್ದರು.ಪೋಟೋ ಪೈಲ್ ನೇಮ್ 25 ಕೆಸಿಕೆಎಂ 5