ಸಿಸಿ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

| Published : Jul 26 2025, 12:30 AM IST

ಸಾರಾಂಶ

ತಾಲೂಕಿನ ಹೆಬ್ಬಸೂರು ಸಮೀಪದ ಅರಳೀಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ಎಸ್‌ಇಪಿ ಯೋಜನೆ ಅನುದಾನ ೫೦ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು

ಚಾಮರಾಜನಗರ; ತಾಲೂಕಿನ ಹೆಬ್ಬಸೂರು ಸಮೀಪದ ಅರಳೀಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ಎಸ್‌ಇಪಿ ಯೋಜನೆ ಅನುದಾನ ೫೦ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ದರಾಗಿ ಗ್ರಾಮಗಳಲ್ಲಿ ರಸ್ತೆ ಚರಂಡಿ, ಸಮುದಾಯ ಭವನ ಆಶ್ರಯಮನೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೇ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ, ಕಾಮಗಾರಿ ನಿರ್ವಹಣೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದು ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾ, ಸದಸ್ಯೆ ವಸಂತಿ, ಗ್ರಾ.ಪಂ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮುಖಂಡರಾದ ಹೆಬ್ಬಸೂರು ವೀರಭದ್ರಸ್ವಾಮಿ, ರಂಗಸ್ವಾಮಿ, ನಿರ್ಮಿತಿ ಕೇಂದ್ರದ ಎಂಜಿನಿಯರ್ ಬೀಮ್ ಸಾಗರ್ ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.