ಸಾರಾಂಶ
ಮುಖ್ಯಮಂತ್ರಿಗಳ ತುರ್ತು ಪರಿಹಾರ ನಿಧಿಯಿಂದ 29 ಲಕ್ಷ ರು. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಯ ಭೂಮಿಪೂಜೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಸಿದ್ದಾಪುರ
ಮುಖ್ಯಮಂತ್ರಿಗಳ ತುರ್ತು ಪರಿಹಾರ ನಿಧಿಯಿಂದ 29 ಲಕ್ಷ ರು. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ನೆರವೇರಿಸಿದರು.ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಗುಹ್ಯ ರಸ್ತೆ ಹಾಗೂ ಗುಹ್ಯ ಕಣ್ಣಂಗಾಲ ರಸ್ತೆಯು ಹಲವಾರು ವರ್ಷಗಳಿಂದ ಹದಗೆಟ್ಟಿದ ಹಿನ್ನೆಲೆಯಲ್ಲಿ ಸಾರ್ವಜನಿಕರ ಒತ್ತಾಯದ ಮೇರೆಗೆ ಮುಖ್ಯ ಮಂತ್ರಿಗಳ ವಿಶೇಷ ನಿಧಿಯಿಂದ 29 ಲಕ್ಷ ರು. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಲಿದೆ. ಈ ಸಂದರ್ಭ ಮಾತನಾಡಿದ ಅವರು ವಿರಾಜಪೇಟೆ ತಾಲೂಕಿನ ಬಹುತೇಕ ರಸ್ತೆಗಳು ಹಲವಾರು ವರ್ಷಗಳಿಂದ ಹದಗೆಟ್ಟಿದ್ದು ಈಗಾಗಲೇ ಮುಖ್ಯಮಂತ್ರಿಗಳ ವಿಶೇಷ ಕಾಳಜಿಯಿಂದ 20 ಕೋಟಿ ರು. ಹಣ ರಸ್ತೆ ದುರಸ್ತಿಗೆ ಮೀಸಲಿಟ್ಟಿದೆ. ಆದಷ್ಟು ಬೇಗ ತಾಲೂಕಿನ ರಸ್ತೆಗಳ ದುರಸ್ತಿ ಕೆಲಸ ಮಾಡಲಾಗುವುದು ಎಂದರು. ಅಲ್ಲದೆ ರಸ್ತೆ ವಿಷಯದಲ್ಲಿ ಸ್ಥಳೀಯರ ಸಹಕಾರ ಕೂಡ ಅತ್ಯಗತ್ಯವಾಗಿದ್ದು ಸಹಕರಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್ ಬಿ ಪ್ರತೀಶ್ ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.