ಸಾರಾಂಶ
ಮಡಿಕೇರಿ, ಗಾಳಿಬೀಡು, ಕಡಮಕಲ್ಲು ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ೩.೫೦ ಕೋಟಿ ರು. ಅನುದಾನ ಲಭ್ಯವಾಗಿದ್ದು, ನ.೧೪ರಂದು ಗಾಳಿಬೀಡು ಗ್ರಾಮದ ಕೋಳಿಗೂಡು ಪ್ರದೇಶದಲ್ಲಿ ಭೂಮಿಪೂಜೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿ, ಗಾಳಿಬೀಡು, ಕಡಮಕಲ್ಲು ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ೩.೫೦ ಕೋಟಿ ರು. ಅನುದಾನ ಲಭ್ಯವಾಗಿದ್ದು, ನ.೧೪ರಂದು ಗಾಳಿಬೀಡು ಗ್ರಾಮದ ಕೋಳಿಗೂಡು ಪ್ರದೇಶದಲ್ಲಿ ಭೂಮಿಪೂಜೆ ನಡೆಯಲಿದೆ ಎಂದು ಗಾಳಿಬೀಡು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಡಿ.ಸುಭಾಷ್ ಆಳ್ವ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾಣದೆ ೨೫ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗಾಳಿಬೀಡು-ಕಡಮಕಲ್ಲು ರಸ್ತೆಯ ಅಭಿವೃದ್ಧಿಗೆ ಶಾಸಕ ಮಂತರ್ ಅವರು ವಿಶೇಷ ಕಾಳಜಿ ವಹಿಸಿದ್ದಾರೆ. ಅವರ ಪ್ರಯತ್ನದಿಂದ ಸರ್ಕಾರದಿಂದ ೩.೫ ಕಿ.ಮೀ. ರಸ್ತೆ ನಿರ್ಮಾಣವಾಗಲಿದೆ. ರಸ್ತೆ ಕಾಮಗಾರಿಗೆ ನ.೧೪ರಂದು ಗಾಳೀಬೀಡು ಗ್ರಾಮದ ಕೋಳಿಗೂಡು ಪ್ರದೇಶದಲ್ಲಿ ಶಾಸಕ ಡಾ.ಮಂತರ್‌ಗೌಡ ಅವರು ಬೆಳಗ್ಗೆ ೯.೩೦ ಗಂಟೆಗೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮತ್ತು ವಲಯ ಕಾಂಗ್ರೆಸ್ ಸಮಿತಿ ದಶಕಗಳಿಂದ ಹೋರಾಟ ಮಾಡಿಕೊಂಡು ಬಂದಿತ್ತು. ಆದರೆ, ಹಿಂದಿನ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಮಾಡಿತ್ತು. ಶಾಸಕ ಮಂತರ್‌ಗೌಡ ಅವರು, ಗೆದ್ದ ತಕ್ಷಣ ೨ಕೋಟಿ ರಸ್ತೆ ಅಭಿವೃದ್ಧಿಗೆ ಮೀಸಲಿಟ್ಟಿದ್ದರು. ನಂತರ ಗ್ರಾಮದ ಸಮಸ್ಯೆಯ ಗಂಭೀರತೆಯನ್ನು ಅರಿತು ಹೆಚ್ಚುವರಿಯಾಗಿ ಒಟ್ಟು ೩.೫೦ ಕೋಟಿ ಅನುದಾನ ಒದಗಿಸಿದ್ದಾರೆ ಎಂದು ಮಾಹಿತಿ ನೀಡಿದರು.ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೋಳುಮುಡಿಯನ ಅನಂತಕುಮಾರ್ ಮಾತನಾಡಿ, ಹಿಂದಿನ ಜನಪ್ರತಿನಿಧಿಗಳು ಮಾಡಲಾಗದ ಕೆಲಸವನ್ನು ಹಾಲಿ ಶಾಸಕರು ಮಾಡಿ ತೋರಿಸಿದ್ದಾರೆ. ಇದರಿಂದ ಜನರಿಗೆ ಉಪಯೋಗವಾಗಲಿದೆ. ಈ ರಸ್ತೆಯಲ್ಲಿ ಹಲವಷ್ಟು ರೆಸಾರ್ಟ್‌ಗಳಿದ್ದು, ಭಾರಿ ವಾಹನಗಳ ಓಡಾಟವಾಗುತ್ತದೆ. ಸ್ಥಳೀಯ ಗ್ರಾ.ಪಂ. ರಸ್ತೆ ಕಾಮಗಾರಿ ಮುಗಿಯುವ ತನಕ ಭಾರಿ ವಾಹನಗಳ ಓಡಾಟಕ್ಕೆ ಪರ್ಯಾಯ ಕ್ರಮಕೈಗೊಂಡು ರಸ್ತೆ ದೀರ್ಘಕಾಲ ಸುಸ್ಥಿತಿಯಲ್ಲಿಡುವತ್ತ ಚಿಂತನೆ ಹರಿಸಬೇಕೆಂದು ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯ ಐಲಪಂಡ ಪುಷ್ಪ ಪೂಣಚ್ಚ, ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ, ಕಾಂಗ್ರೆಸ್ ಸದಸ್ಯರಾದ ಮದನ್ ಕೊಂಬಾರನ, ಗಣಪತಿ ಹಾಜರಿದ್ದರು.;Resize=(128,128))
;Resize=(128,128))
;Resize=(128,128))