ಸಾರಾಂಶ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿಯಿಂದ ಕುಳಲಿಯ ತಾಲೂಕು ಗಡಿಯವರೆಗೆ ರಾಜ್ಯ ಹೆದ್ದಾರಿ ₹೭೦ ಲಕ್ಷ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಭೂಮಿ ಪೂಜೆ ನೆರವೆರಿಸಿದರು. ಈ ವೇಳೆ ಮಾತನಾಡಿದ ಅವರು, ಉತ್ತಮ ರಸ್ತೆ ಸೇರಿದಂತೆ ಕ್ಷೇತ್ರದ ಪ್ರಮುಖ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಲಿ, ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹೇಳಿದರು.
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ತಾಲೂಕಿನ ನಾವಲಗಿಯಿಂದ ಕುಳಲಿಯ ತಾಲೂಕು ಗಡಿಯವರೆಗೆ ರಾಜ್ಯ ಹೆದ್ದಾರಿ ₹೭೦ ಲಕ್ಷ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಭೂಮಿ ಪೂಜೆ ನೆರವೆರಿಸಿದರು. ಈ ವೇಳೆ ಮಾತನಾಡಿದ ಅವರು, ಉತ್ತಮ ರಸ್ತೆ ಸೇರಿದಂತೆ ಕ್ಷೇತ್ರದ ಪ್ರಮುಖ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಲಿ, ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹೇಳಿದರು. ಈ ಸಂದರ್ಭದಲ್ಲಿ ಆನಂದ ಕಂಪು, ಗ್ರಾಮ ಪಂಚಾಯತಿ ಅಧ್ಯಕ್ಷ ಸದಾಶಿವ ಸವದಿ, ಮುತ್ತಪ್ಪ ಅಂಗಡಿ, ಗುರು ಮರಡಿಮಠ, ಗೋವಿಂದ ಪಾಟೀಲ, ಹನಮಂತ ಪಾಟೀಲ, ವಿಠ್ಠಲ ಜನವಾಡ, ತುಕ್ಕಪ್ಪ ನಾಳ, ಬಸವರಾಜ ಗಣಿ, ರಾಜು ಕದಂ, ಸಿದ್ದು ಕಂಚು ಸೇರಿದಂತೆ ಅನೇಕರು ಇದ್ದರು.