ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ 24 ಲಕ್ಷ ರು. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು.

ನಂತರ ಸಂಸದರ 5 ಲಕ್ಷ ರು. ಅನುದಾನದಲ್ಲಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರು ಘಟಕಕ್ಕೆ ಚಾಲನೆ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಜಾಗ ವಿಶಾಲಾವಾಗಿದ್ದು, ಮತ್ತಷ್ಟು ಅನುದಾನ ನೀಡಿದರೆ ದೊಡ್ಡದಾಗಿ ನಿರ್ಮಾಣ ಮಾಡಿಕೊಳ್ಳುವುದಾಗಿ ತಿಳಿಸಿ, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

ತಾಲೂಕಿನಲ್ಲಿ ಬಹುತೇಕ ಗ್ರಾಮಗಳಲ್ಲಿ ಅಂಬೇಡ್ಕರ್ ಸಮುದಾಯ ಭವನಗಳು ಅರ್ಧಕ್ಕೆ ನಿಂತಿವೆ. ಇನ್ನೂ ಕೆಲವು ಭವನಗಳು ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿವೆ. ಮತ್ತಷ್ಟು ಗ್ರಾಮದಲ್ಲಿ ಭವನ ನಿರ್ಮಾಣವಾಗಬೇಕಿದೆ. ಎಲ್ಲದಕ್ಕೂ ಮುಂದಿನ ದಿನಗಳಲ್ಲಿ ಕ್ರಮವಹಿಸಲಾಗುವುದು ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊನಗಾನಹಳ್ಳಿ ಕಿಟ್ಟಿ, ದಸಂಸ ಮುಖಂಡಕಣಿವೆರಾಮು, ವಕೀಲ ಕಣಿವೆ ಯೋಗೇಶ್, ಪಿಎಲ್ ಡಿ ಬ್ಯಾಂಕ್ ನಿದೇರ್ಶಕ ಚಂದ್ರಶೇಖರ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ಬಿ.ಜೆ.ಸ್ವಾಮಿ, ವೆಂಕಟೇಶ್, ದೇವರಾಜು, ಮರೀಗೌಡ, ಅಂಕಪ್ಪ, ಶಶಾಂಕ್, ರಮೇಶ್, ಸುರೇಶ್, ರೇವಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಯಕಿ ನಿದೇರ್ಶಕಿ ಕೋಮಲ, ಪಿಡಿಒ ಕುಮಾರ್, ಯಾ.ಸುಬ್ಬೇಗೌಡ ಸೇರಿದಂತೆ ಅನೇಕ ಮುಖಂಡರು ಇದ್ದರು.ಮೇ 5ರಂದು ಬಸವ ಜಯಂತಿ ಹಾಗೂ ಬಸವಶ್ರೀ ಪ್ರಶಸ್ತಿ ಪ್ರದಾನಮಂಡ್ಯ:


ನಗರದ ವೀರಶೈವ ವಿದ್ಯಾರ್ಥಿ ನಿಲಯ ಆವರಣದಲ್ಲಿ ಮೇ 5ರಂದು ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನಲ್ ಟ್ರಸ್ಟ್ ಕೊಪ್ಪ ವತಿಯಿಂದ ಬಸವ ಜಯಂತಿ ಹಾಗೂ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ.ಟಿ. ಹನುಮಂತು ತಿಳಿಸಿದ್ದಾರೆ.ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಅಧ್ಯಕ್ಷತೆ ವಹಿಸುವರು. ಬಸವಶ್ರೀ ಪ್ರಶಸ್ತಿಯನ್ನು ಶ್ರೀ ಜಗದ್ಗುರು ಬಸವೇಶ್ವರ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಕೆ ಎಸ್.ಷಡಕ್ಷರಿ ಅವರಿಗೆ ಪ್ರದಾನ ಮಾಡಿ ಗೌರವಿಸಲಾಗುವುದು.

ವೇದಿಕೆಯಲ್ಲಿ ಟ್ರಸ್ಟ್ ನ ಅಧ್ಯಕ್ಷ ಕೆ.ಟಿ ಹನುಮಂತು ಪ್ರಸ್ತಾವಿಕ ನುಡಿಯಲಿದ್ದಾರೆ. ಶಿಕ್ಷಣ ಇಲಾಖೆಯ ರಾಜೇಗೌಡ ಅಭಿನಂದನೆ ನುಡಿ ನುಡಿಯಲಿದ್ದಾರೆ, ಬಸವಣ್ಣ ಅವರನ್ನು ಕುರಿತು ಸಾಹಿತಿ ಭವಾನಿ ಲೋಕೇಶ್ ಮಾತನಾಡಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಬಸವ ಸಮಿತಿ ಅಧ್ಯಕ್ಷ ಎಂ.ಬಿ.ರಾಜಶೇಖರ್ ನಗರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದರಾಜು, ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್. ಶಿವಪ್ರಕಾಶ್, ಅಲಯನ್ಸ್ ಸಂಸ್ಥೆ 1ನೇ ಜಿಲ್ಲಾ ಉಪ ರಾಜ್ಯಪಾಲ ಕೆ.ಎಸ್.ಚಂದ್ರಶೇಖರ್ ಪಾಲ್ಗೊಳ್ಳಲಿದ್ದಾರೆ. ಪ್ರತಿಭಾಂಜಲಿ ಡೇವಿಡ್ ಮತ್ತು ತಂಡದವರಿಂದ ವಚನ ಗಾಯನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿದ್ದಾರೆ.