ಮಡಿವಾಳ ಮಾಚಯ್ಯನವರು ವಚನಕಾರರಾಗಿ, ಶರಣರಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಎಲ್ಲಾ ಸಮುದಾಯಗಳಿಗೂ ಪ್ರೇರೇಪಣೆಯಾಗಿ ಮಾರ್ಗದರ್ಶನ ನೀಡಿದ್ದರು.

ಕನ್ನಡಪ್ರಭ ವಾರ್ತೆ ಹನೂರು

ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ₹16 ಲಕ್ಷ ವೆಚ್ಚದಲ್ಲಿ ಮಡಿವಾಳ ಮಾಚಿದೇವ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಡಿವಾಳ ಮಾಚಯ್ಯನವರು ವಚನಕಾರರಾಗಿ, ಶರಣರಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಎಲ್ಲಾ ಸಮುದಾಯಗಳಿಗೂ ಪ್ರೇರೇಪಣೆಯಾಗಿ ಮಾರ್ಗದರ್ಶನ ನೀಡಿದ್ದರು. ಅವರ ಮಾರ್ಗವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಾಆಚಿದೇವ ಸಮುದಾಯ ಭವನ ನಿರ್ಮಾಣ ಮಾಡುತ್ತಿದ್ದು, ಇಲ್ಲಿನ ಸಮುದಾಯ ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ತಿಳಿಸಿದರು. ಮಡಿವಾಳ ಸಮುದಾಯ ಜಿಲ್ಲಾಧ್ಯಕ್ಷ ರೇವಣ್ಣ, ಜಿಲ್ಲಾ ಉಪಾಧ್ಯಕ್ಷ ವಿಜಯ್‌ಕುಮಾರ್‌, ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಮ್ತಾಜ್‌, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸಿದ್ದರಾಜು, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ, ನಟರಾಜುಗೌಡ, ಸಮುದಾಯದ ಯಜಮಾನರಾದ ರುದ್ರಣ್ಣ, ಮೋಹನ್, ರಮೇಶ್, ಲಿಂಗರಾಜು, ರವಿ, ರಾಜೂಗೌಡ, ಮಹದೇವ್, ಇನ್ನಿತರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.