ಮಾನ್ವಿ: ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಆರೋಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ದದ್ದಲ ಭೂಮಿ ಪೂಜೆ ನೆರವೇರಿಸಿದರು.
ಆರೋಲಿ ಶ್ರೀ ಹುಲಿಗೆಮ್ಮ ದೇವಸ್ಥಾನದ ಹತ್ತಿರ ₹1 ಕೋಟಿ 75 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಮತ್ತು ವಿದ್ಯುತ್ ದೀಪ ನಿರ್ಮಾಣ ಹಾಗೂ ದೇವಸ್ಥಾನ ಆವರಣದಲ್ಲಿ ಕೆಆರ್ಡಿಎಲ್ ಇಲಾಖೆಯ ₹50 ಲಕ್ಷ ಅನುದಾನದಲ್ಲಿ ಶೌಚಾ ಲಯ ಕಟ್ಟಡ, ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.ನಂತರ ತುರಕನಡೋಣ ಗ್ರಾಮದಲ್ಲಿ ಕೆಕೆಆರ್ಡಿಬಿಯ ಮ್ಯಾಕ್ರೋ ಯೋಜನೆಯಡಿ ₹ 5 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿಗಾಗಿ ಹೊಸ ಕೆರೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರುಗಳು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು, ಗ್ರಾಮಸ್ಥರು, ನಾಮನಿರ್ದೆಶನ ಸದಸ್ಯರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.---
09ಕೆಪಿಎಂಎನ್ವಿ01: ಮಾನ್ವಿ: ತಾಲೂಕಿನ ಆರೋಲಿ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ ಭೂಮಿ ಪೂಜೆ ನೆರವೇರಿಸಿದರು.