ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ವಾತ್ಸಲ್ಯ ಮನೆ’ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಕೋಕೇರಿ ಗ್ರಾಮದಲ್ಲಿ ನೆರವೇರಿಸಲಾಯಿತು.
ನಾಪೋಕ್ಲು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ವಾತ್ಸಲ್ಯ ಮನೆ’ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಕೋಕೇರಿ ಗ್ರಾಮದಲ್ಲಿ ನೆರವೇರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಮಡಿಕೇರಿ ತಾಲೂಕಿನ ಭಾಗಮಂಡಲ ವಲಯದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಕೇರಿ ಗ್ರಾಮದಲ್ಲಿ ವಾಸವಿರುವ ಜಾಜಿ ಎಂಬವರಿಗೆ ವಾಸಿಸಲು ಯೋಗ್ಯವಾದ ಮನೆ ಇಲ್ಲದ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ಮಂಜೂರಾಗಿದೆ.ವಲಯ ಮೇಲ್ವಿಚಾರಕ ಸುನಿಲ್, ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಮಾಲಿನಿ, ಬಾಬು ಆಚಾರ್ಯ, ತೀರ್ಥರಾಮ್, ನಯನ ಕುಮಾರ್, ಸೇವಾ ಪ್ರತಿನಿಧಿ ಪ್ರಭ, ಟ್ರಸ್ಟಿನ ಸದಸ್ಯರು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.