ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಕ್ಷೇತ್ರದ ಜನರಿಗೆ ಗುಣಮಟ್ಟದ ಶಿಕ್ಷಣ, ನೀರಾವರಿ ಮತ್ತು ಆರೋಗ್ಯ ಸೌಕರ್ಯಗಳನ್ನು ಸಕಾಲದಲ್ಲಿ ಪೂರೈಸುವ ಮೂಲಕ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ತಿಳಿಸಿದರು.ತಾಲೂಕಿನ ಕೋರವಾರ ಗ್ರಾಮದಲ್ಲಿ ಶುಕ್ರವಾರ ಸುಮಾರು 387 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಗ್ರಾಮದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ದುಡಿಯುವುದರ ಜತೆಗೆ ಎಲ್ಲಾ ವರ್ಗದ ಜನರಿಗೆ ಪ್ರಾಮಾಣಿಕವಾಗಿ ಸರ್ಕಾರಿ ಸೌಲತ್ತುಗಳನ್ನು ತಲುಪಿಸಲು ಬದ್ಧನಾಗಿದ್ದೇನೆ. ಸರ್ಕಾರದ ಅನುದಾನದ ಕೊರತೆಯಲ್ಲಿ ಗ್ರಾಮದಲ್ಲಿ ಸುಮಾರು 100ಲಕ್ಷ ರೂ, ವೆಚ್ಚದ ಸಿ.ಸಿ.ರಸ್ತೆ, ವಿವಿಧ ಯೋಜನೆಗಳ ಅಡಿಯಲ್ಲಿ ಕೈಲಾಸ ಮಠ, ಮಾಂತೇಶ್ವರ ಮಠ, ಬೀರಲಿಂಗೇಶ್ವರ ದೇವಸ್ಥಾನದ ಸಮುದಾಯ ಭವನ ಸೇರಿ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಸಮುದಾಯ ಭವನಗಳ ನಿರ್ಮಾಣ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಗೆ ಸುಮಾರು 266 ಲಕ್ಷ ರೂ ಅನುದಾನವನ್ನು ನೀಡುವ ಮೂಲಕ ಗ್ರಾಮದ ಅಭಿವೃದ್ಧಿಗೆ ಇಂದು ಸುಮಾರು 387 ಲಕ್ಷ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸುವ ಚುನಾವಣೆಯಲ್ಲಿ ಕೊಟ್ಟ ಮಾತನ್ನು ಈಡೇರಿಸಿದ್ದೇನೆ. ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದೇನೆ. ಬಹುದಿನದ ಬೇಡಿಕೆಯಾದ ಕೋರವಾರ ಗ್ರಾಮ ಹೋಬಳಿ ಕೇಂದ್ರ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ, ಹೋಬಳಿ ಕೇಂದ್ರ ಮಾಡಲು ಬದ್ಧ ಎಂದರು.
ಪ್ರಮುಖರಾದ ಶೇಖರಗೌಡ ಪಾಟೀಲ ಹಾಗೂ ಎಂ.ಡಿ ವನಹಳ್ಳಿ ಮಾತನಾಡಿ, ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದ ನಮ್ಮ ಗ್ರಾಮಕ್ಕೆ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು, ವಿರೋಧ ಪಕ್ಷದಲ್ಲಿದ್ದರೂ ಸಾಕಷ್ಟು ಅನುದಾನ ನೀಡುವ ಮೂಲಕ ಗ್ರಾಮದ ಪ್ರಗತಿಗೆ ಶ್ರಮಿಸುತ್ತಿರುವುದು ಸಂತಸ ತಂದಿದೆ ಎಂದರು.ಕಾರ್ಯಕ್ರಮದ ಸಾನ್ನಿಧ್ಯವನ್ನು ಸ್ಥಳೀಯ ಮಠದ ಕಾಶೀಲಿಂಗ ಮಹಾರಾಜರು ವಹಿಸಿದ್ದರು.
ಮುಖಂಡರಾದ ಬಾಪುಗೌಡ ಪಾಟೀಲ, ಮಾಂತಗೌಡ ಸುಂಬಡ, ಗುರು ಹುಣಸಗಿ, ಮಲ್ಲಿಕಾರ್ಜುನ ಕಲಬುರ್ಗಿ, ಆರೋಗ್ಯ ಇಲಾಖೆಯ ಎಇಇ ಪ್ರಶಾಂತ ವಲ್ಲ್ಯಾಪುರ, ಎಇ ಮಹೇಶ ಜಾದವ, ಸಿಂಗಾಡಿ ಕನ್ಸ್ಟ್ರಕ್ಷನ್ ಗುತ್ತಿಗೆದಾರರಾದ ಪ್ರತೀಕ ಬಿರಾದಾರ, ಆನಂದ ದೇಸಾಯಿ, ರವಿ ಮಲಗೊಂಡ, ಆರೋಗ್ಯ ಇಲಾಖೆ ಡಾ.ಅನಿಲ ಕುಮಾರ ಬಿರಾದಾರ, ಎಂ.ಎಸ್.ಬಾಗೇವಾಡಿ, ಮಲ್ಲನಗೌಡ ಸಾಲವಾಡಗಿ, ಸಿದ್ದು ತಿಮ್ಮಾಪುರ, ಬಸವರಾಜು ಬಡಿಗೇರ, ಗ್ರಾಮಸ್ಥರು, ಸದಸ್ಯರು ಇದ್ದರು.
---------------
ಫೋಟೋ 11ಡಿಎಚಪಿ1