ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚೀರನಹಳ್ಳಿ ಗ್ರಾಮ ಮತ್ತು ಎಸ್.ಡಿ.ಜಯರಾಮ್ ಬಡಾವಣೆಯ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭೂಮಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಚೀರನಹಳ್ಳಿ ಗ್ರಾಮದ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ೬೦ ಲಕ್ಷ ರು. ಹಾಗೂ ಎಸ್ ಡಿ ಜಯರಾಮ್ ಬಡಾವಣೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ೩೦ ಲಕ್ಷ ರು. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ ಎಂದರು.
ಮುಂದಿನ ದಿನಗಗಳಲ್ಲಿ ಹಂತ ಹಂತವಾಗಿ ಉಳಿದ ರಸ್ತೆ ಮತ್ತು ಚರಂಡಿ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗುವುದು, ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳನ್ನು ಗುಣಮಟ್ಟದಿಂದ ಇರುವಂತೆ ಗ್ರಾಮಸ್ಥರು ನೋಡಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಯುವಮುಖಂಡ ಚೀರನಹಳ್ಳಿ ಲಕ್ಷ್ಮಣ್, ಜಿಪಂ ಮಾಜಿ ಸದಸ್ಯ ಮಂಜುನಾಥ್, ತಾಪಂ ಮಾಜಿ ಸದಸ್ಯ ರಮೇಶ್ ಮಿತ್ರ, ಸುರೇಶ್, ಎಂ.ವಿ.ಕೃಷ್ಣ, ನಾಗರಾಜು, ಇಂಜನಿಯರ್ ರಾಹುಲ್, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಪಂಸದಸ್ಯರು ಹಾಜರಿದ್ದರು.
ದೊಡ್ಡಬಳ್ಳಾಪುರದಲ್ಲಿ ಮಾ.17ರಿಂದ 19ರ ವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರಮಂಡ್ಯ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾ.17ರಿಂದ 19ರವರೆಗೆ 3 ದಿನಗಳ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ರಾಜ್ಯ ಸಂಘಟನಾ ಸಂಚಾಲಕ ನಂಜುಂಡ ಮೌರ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವ ಜನತೆ ಮೊಬೈಲ್ ಗೀಳು, ಮೊಜು ಮಸ್ತಿಯಲ್ಲಿ ತಲ್ಲೀನರಾಗಿದ್ದಾರೆ. ಅವರಿಗೆ ಸ್ವಾಭಿಮಾನಿ ಬದುಕಿಗೆ ಬೇಕಾದ ವಿಷಯಗಳನ್ನು ತಿಳಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.ರಾಜ್ಯದ ನಿರುದ್ಯೋಗಿ ಯುವ ಜನತೆಗೆ ಸ್ವಾಭಿಮಾನಿ ಬದುಕು ರೂಪಿಸಲು, ಸಮಾಜದಲ್ಲಿನ ಅನ್ಯಾಯಗಳ ವಿರುದ್ಧ ಗಟ್ಟಿದನಿ ಎತ್ತಲು, ಆರ್ಥಿಕ ಸದೃಢತೆಗೆ ಜಾಗೃತಿ ಮೂಡಿಸಲು ಎಲ್ಲ ವರ್ಗದ ಯುವಜನರಿಗೆ ಅರಿವು ಮೂಡಿಸಲು ನಡೆಯುತ್ತಿರುವ ಕಾರ್ಯಕ್ರಮವನ್ನು ಕಾರ್ಮಿಕ ಮಂತ್ರಿ ಎಸ್.ಸಂತೋಷ್ ಲಾಡ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಚಿಂತಕರು ಭಾಗವಹಿಸಿ ಅಗತ್ಯ ವಿಷಯಗಳ ಬಗ್ಗೆ ಅರಿವು ಮೂಡಿಸುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ತಾಳಶಾಸನ ಮೋಹನ್, ಜಿಲ್ಲಾ ಸಂಚಾಲಕ ಶಂಕರ್, ಸಂಘಟನಾ ಸಂಚಾಲಕ ನಂಜುಂಡಸ್ವಾಮಿ, ವಿಜಯಕುಮಾರ್, ಜಯದೇವ್, ಗಣೇಶ್, ಸೋಮಣ್ಣ ಇದ್ದರು.