ಸಾರಾಂಶ
ವಿಜಯಪುರ: ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ವಾರ್ಡ್ ನಂ.22 ರಲ್ಲಿ ಬರುವ ಜಿಲ್ಲಾ ಪಂಚಾಯಿತಿ ಮುಖ್ಯದ್ವಾರದಿಂದ ಡಿ.ದೇವರಾಜು ಅರಸು ಭವನವರೆಗೆ ₹4.90 ಕೋಟಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಸ್ಟ್ರೀಟ್ ಲೈಟ್ ಅಳವಡಿಕೆ ಕಾಮಗಾರಿಗೆ ಗಾಂಧಿ ಭವನದ ಎದುರು ಭೂಮಿಪೂಜೆ ನೆರವೇರಿಸಿದರು.
ವಿಜಯಪುರ: ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ವಾರ್ಡ್ ನಂ.22 ರಲ್ಲಿ ಬರುವ ಜಿಲ್ಲಾ ಪಂಚಾಯಿತಿ ಮುಖ್ಯದ್ವಾರದಿಂದ ಡಿ.ದೇವರಾಜು ಅರಸು ಭವನವರೆಗೆ ₹4.90 ಕೋಟಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಸ್ಟ್ರೀಟ್ ಲೈಟ್ ಅಳವಡಿಕೆ ಕಾಮಗಾರಿಗೆ ಗಾಂಧಿ ಭವನದ ಎದುರು ಭೂಮಿಪೂಜೆ ನೆರವೇರಿಸಿದರು. ನಂತರ ಕನಕದಾಸ ಬಡಾವಣೆಯ ಡಿ.ದೇವರಾಜ ಅರಸ ಭವನದಿಂದ ಬಿ.ಎಸ್.ಎನ್.ಎಲ್ ಕ್ವಾಟರ್ಸ್‌ವರೆಗೆ ₹3.10 ಕೋಟಿ ಅನುದಾನದಲ್ಲಿ ಸಿಸಿ ರಸ್ತೆ ಹಾಗೂ ಡಾಂಬರ ರಸ್ತೆ ಸುಧಾರಣೆ ಕಾಮಗಾರಿಗೆ ಕನಕದಾಸ ಬಡಾವಣೆಯ ಬಸ್ ಸ್ಟಾಪ್ ಬಳಿ ಭೂಮಿಪೂಜೆ ನೆರವೇರಿಸಿದರು. ಭೂಮಿಪೂಜೆ ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದೇ ವೇಳೆ ಸ್ಥಳೀಯ ನಿವಾಸಿಗಳು ಶಾಸಕರಿಗೆ ಆತ್ಮೀಯವಾಗಿ ಸನ್ಮಾನಿಸಿದರು.
ಮಹಾನಗರ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ಮುಖಂಡ ಪಾಂಡು ಸಾಹುಕಾರ ದೊಡಮನಿ, ಶಂಕರ ಹೂಗಾರ, ಚಂದ್ರು ಚೌದರಿ, ಶರಣು ಕಾಖಂಡಕಿ, ರಾಚು ಬಿರಾದಾರ ಸೇರಿದಂತೆ ಮುಖಂಡರು, ಸ್ಥಳೀಯ ನಿವಾಸಿಗಳು ಹಾಗೂ ಅಧಿಕಾರಿಗಳು ಇದ್ದರು.