ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

| Published : Feb 26 2024, 01:31 AM IST

ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಪೇರೂರು ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲತ್‌ ನಾಡು ಪೇರೂರು ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ಕಾಂಗ್ರೆಸ್ ಬ್ಲಾಕ್ ಉಪಾಧ್ಯಕ್ಷ, ಗ್ರಾಮ ಪಂಚಾಯಿತಿ ಸದಸ್ಯ ಮಚುರ ರವೀಂದ್ರ ಮಾತನಾಡಿ, ಶಾಸಕರ ಅನುದಾನ 5 ಲಕ್ಷ ರು. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲು ಉದ್ದೇಶಿಸಿದ್ದು, ಮಾರ್ಚ್ ತಿಂಗಳಲ್ಲಿ ಶಿವರಾತ್ರಿ ಉತ್ಸವದಂದು ದೇವಾಲಯದ ವಾರ್ಷಿಕೋತ್ಸವ ನಡೆಯಲಿದೆ. ಅದರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಡಾಂಬರೀಕರಣವನ್ನು ಸದ್ಯದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ತೆನ್ನಿ ರ ಮೈನಾ, ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಬ್ಲಾಕ್ ಕಾಂಗ್ರೆಸ್ ನಾಪೋಕ್ಲು ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಬಟ್ಟಕಾರಂಡ ಮುತ್ತಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಕೋಡಿಯಂಡ ರಜನಿ, ಮಣವಟ್ಟಿರ ಕುಶಾಲಪ್ಪ, ತಾಪ೦ಡ ಅಪ್ಪಣ್ಣ, ಚಂಗೇಟಿರ ಕುಶಾಲಪ್ಪ, ಚಿರೋಟಿರ ಮಾಚಯ್ಯ, ಅಪ್ಪಚಟ್ಟೋಳಂಡ, ಶಾಮ್ ಕಾಳಯ್ಯ, ಚಂಗೆಟ್ಟಿರ ಮುತ್ತಣ್ಣ, ಪಾಲೆಯಡ ಅಪ್ಪಣ್ಣ, ಪಾಲೆಯಡ ಅಯ್ಯಪ್ಪ ಅಪ್ಪಚಟ್ಟೋಳಂಡ ಮತ್ತಿತರರು ಪಾಲ್ಗೊಂಡಿದ್ದರು.