ಉಪವಿಭಾಗೀಯ ಆಸ್ಪತ್ರೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

| Published : Oct 22 2024, 12:10 AM IST

ಉಪವಿಭಾಗೀಯ ಆಸ್ಪತ್ರೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ 1.30 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಎಲೆಕೆರೆ ಚಂದ್ರಶೇಖರ್ ಭೂಮಿ ಪೂಜೆ ನೆರವೇರಿಸಿದ್ದು, ಮುಂದಿನ ದಿನಗಳಲ್ಲಿ ಆಸ್ಪತ್ರೆ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ 1.30 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಎಲೆಕೆರೆ ಚಂದ್ರಶೇಖರ್ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಆಸ್ಪತ್ರೆ ಅಭಿವೃದ್ಧಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮುಂದಾಗಿದ್ದಾರೆ. ಸರ್ಕಾರದಿಂದ ಆಸ್ಪತ್ರೆ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮಂಜೂರು ಮಾಡಿಸಿದ್ದು, ಮುಂದಿನ ದಿನಗಳಲ್ಲಿ ಆಸ್ಪತ್ರೆ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಎಂದರು.

ಆಸ್ಪತ್ರೆ ಮುಖ್ಯ ಆಡಳಿತಾ ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ ಮಾತನಾಡಿ, ಆರೋಗ್ಯ ಇಲಾಖೆಯ ಅಭಿವೃದ್ಧಿ ಅನುದಾನದಡಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸೌಲಭ್ಯ, ಕೆಲವು ದುರಸ್ತಿ ಕಾರ್ಯ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತದೆ ಎಂದು ವಿವರಿಸಿದರು.

ಈ ವೇಳೆ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಡಾ.ಸಿ.ಎ.ಅರವಿಂದ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ, ಎಣ್ಣೆಹೊಳೆಕೊಪ್ಪಲು ಮಂಜುನಾಥ್, ರೈತಸಂಘದ ಮುಖಂಡರಾದ ಹರವು ಪ್ರಕಾಶ್, ಗೋವಿಂದರಾಜು, ಚಿಕ್ಕಾಡೆ ವಿಜಯೇಂದ್ರ, ಎಣ್ಣೆಹೊಳೆಕೊಪ್ಪಲು ರಘು, ಹಿರೇಮರಳಿ ಶಿವಕುಮಾರ್, ಆರೋಗ್ಯ ಇಲಾಖೆ ಎಂಜನೀಯರ್ ಶಿವೇಗೌಡ, ಗುತ್ತಿಗೆದಾರರಾದ ಸೋಮೇಗೌಡ, ಪ್ರಜ್ವಲ್, ಧನುಷ್ ಇತರರಿದ್ದರು.ಇಂದು ಮಿನಿ ಉದ್ಯೋಗ ಮೇಳ

ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮೆ.ಇಕ್ವಿಟಾಸ್ ಸ್ಮಾಲ್ ಫೈನಾನ್ಸ್, ಮೆ.ಬಿ.ಜೆಡ್ ಫೈನಾನ್ಸ್ ಲಿಮಿಟೆಡ್, ಮೆ.ಇಂದೂಸ್ ಟಿ.ಎಂ.ಟಿ ಇಂಡಸ್ಟ್ರೀಸ್ ಹಾಗೂ ಮೆ.ಡೆಕ್ಕನ್ ಮ್ಯಾನೇಜ್‌ಮೆಂಟ್ ಸಂಸ್ಥೆ ಸಹಯೋಗದಲ್ಲಿ ಅ.22 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಹಾಗೂ ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಹಾಜರಾಗತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ದೂ-08232-295124 ಮತ್ತು ಮೊ-9164642684, ಮೊ-8970646629 ಹಾಗೂ ಮೊ-8660061488 ಅನ್ನು ಸಂಪರ್ಕಿಬಹುದು ಎಂದು ಮಂಡ್ಯ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.