ಸಾರಾಂಶ
ಬೆಳಗಾವಿ: ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿನಿಯರ ನೂತನ ವಸತಿ ನಿಲಯ ಕಾಮಗಾರಿಗೆ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು. ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಅಭಿನವ ಸಿದ್ಧಾರೂಢ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿನಿಯರ ನೂತನ ವಸತಿ ನಿಲಯ ಕಾಮಗಾರಿಗೆ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು. ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಅಭಿನವ ಸಿದ್ಧಾರೂಢ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಿ.ಆರ್.ಪಟಗುಂದಿ, ಕಾರ್ಯಾಧ್ಯಕ್ಷ ಎಫ್.ವಿ.ಮಾನ್ವಿ ಸೇರಿದಂತೆ ಇತರರು ಇದ್ದರು.