ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರು

| Published : Sep 26 2025, 01:00 AM IST

ಸಾರಾಂಶ

ಎಸ್.ಎಲ್. ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಪ್ರಮುಖ ಕೊಂಡಿಯನ್ನು ಕಳೆದುಕೊಂಡಂತಾಗಿದೆ. ತಾಲೂಕಿನ ಸುಪುತ್ರರಾಗಿ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದ ಭೈರಪ್ಪನವರ ಹುಟ್ಟೂರು ಸಂತೇಶಿವರ ಗ್ರಾಮಕ್ಕೆ ಕೊನೇ ದಿನಗಳಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದು ಕೆರೆತುಂಬಿಸುವ ಯೋಜನೆಗೆ ಸಾಕಷ್ಟು ಶ್ರಮವಹಿಸಿದ ಹಿರಿಯಚೇತನ. ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್, ಪದ್ಮಭೂಷಣ, ಪದ್ಮಶ್ರೀ, ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಸಾಹಿತ್ಯ ಲೋಕದ ಅನರ್ಘ್ಯ ರತ್ನ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಮಾಜಿ ಶಾಸಕ ಎಂ. ಎ. ಗೋಪಾಲಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಸಾಹಿತ್ಯ ಲೋಕದ ಅನರ್ಘ್ಯ ರತ್ನ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಮಾಜಿ ಶಾಸಕ ಎಂ. ಎ. ಗೋಪಾಲಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.ಎಸ್.ಎಲ್. ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಪ್ರಮುಖ ಕೊಂಡಿಯನ್ನು ಕಳೆದುಕೊಂಡಂತಾಗಿದೆ. ತಾಲೂಕಿನ ಸುಪುತ್ರರಾಗಿ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದ ಭೈರಪ್ಪನವರ ಹುಟ್ಟೂರು ಸಂತೇಶಿವರ ಗ್ರಾಮಕ್ಕೆ ಕೊನೇ ದಿನಗಳಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದು ಕೆರೆತುಂಬಿಸುವ ಯೋಜನೆಗೆ ಸಾಕಷ್ಟು ಶ್ರಮವಹಿಸಿದ ಹಿರಿಯಚೇತನ. ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್, ಪದ್ಮಭೂಷಣ, ಪದ್ಮಶ್ರೀ, ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.ಕೊನೆಯ ಕಾರ್ಯಕ್ರಮದಲ್ಲಿ ಅವರೊಂದಿಗೆ ಕೆಲವು ವೇದಿಕೆ ಹಂಚಿಕೊಂಡಿದ್ದು ಜೀವನದ ಮಹತ್ವದ ಕ್ಷಣಗಳಾಗಿವೆ. ಕೆಲವು ವ್ಯಕ್ತಿತ್ವಗಳೇ ಹಾಗೆ. ಅವರಿಗೆ ಪ್ರಶಸ್ತಿ ಬಂದಿದೆ ಎನ್ನುವುದಕ್ಕಿಂತ ಅವರಿಂದ ಪ್ರಶಸ್ತಿಗಳಿಗೇ ಸಮ್ಮಾನ ಪಡೆಯುತ್ತದೆ. ಅಂಥ ಮಹನೀಯರ ಸಾಲಿನಲ್ಲಿ ಎಸ್.ಎಲ್. ಭೈರಪ್ಪ ಅವರು ಇದ್ದಾರೆ ಎಂದು ಸಂಸದರು ಸ್ಮರಿಸಿದ್ದಾರೆ.ಕನ್ನಡ ಸಾರಸ್ವತ ಲೋಕ ಮಾತ್ರವಲ್ಲದೇ, ಹಿಂದಿ, ಇಂಗ್ಲಿಷ್‌ ಸೇರಿದಂತೆ ಭಾರತೀಯ ಭಾಷೆಗಳಿಗೆ ಇವರ ಕಾದಂಬರಿಗಳು ಅನುವಾದಗೊಂಡಿದ್ದು, ಶ್ರೀಯುತರು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದರು. ಲೇಖನಿ ಮೂಲಕ ಎಲ್ಲರನ್ನೂ ಸೆಳೆದುಕೊಂಡಿದ್ದರು. ತಮ್ಮ ಆದಾಯವನ್ನು ಸಮಾಜ ಸೇವೆಗೆ ಮೀಸಲಿರಿಸಿ ಜನಮಾನಸದಲ್ಲಿ ವಿಶೇ? ಸ್ಥಾನಮಾನ ಪಡೆದುಕೊಂಡಿದ್ದಾರೆ. ಪ್ರೌಢಶಿಕ್ಷಣ, ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಸಾಂಸ್ಕೃತಿಕ ರಾಜಧಾನಿಯಲ್ಲೇ ಪೂರೈಸಿ ಮೈಸೂರಿನಲ್ಲೇ ನೆಲೆ ಕಂಡುಕೊಂಡಿದ್ದರು. ಭೈರಪ್ಪನವರ ಮೂಲಕವೂ ಮೈಸೂರು ವಿಶೇಷ ಸ್ಥಾನ ಪಡೆದುಕೊಂಡಿದೆ ಎಂದು ಮಾಜಿ ಶಾಸಕರು ತಿಳಿಸಿದ್ದಾರೆ.ಮತದಾನ, ವಂಶವೃಕ್ಷ, ಗೃಹಭಂಗ, ಗ್ರಹಣ, ದಾಟು, ಅನ್ವೇಷಣ, ಪರ್ವ, ಮಂದ್ರ, ಆವರಣ, ಯಾನ ಸೇರಿದಂತೆ ಹಲವಾರು ಕಾದಂಬರಿಗಳು ಇಂದಿಗೂ ಜನಮಾನಸದಲ್ಲಿ ಹಸಿರಾಗಿದೆ. ಅವರು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇವರ ಕೆಲವು ಕಾದಂಬರಿಗಳು ಚಲನಚಿತ್ರಗಳಾಗಿ ಅಭಿಮಾನಿಗಳಿಗೆ ಮುದ ನೀಡಿವೆ ಎಂದು ಹೇಳಿದ್ದಾರೆ.

ಭೈರಪ್ಪನವರ ನಿಧನದಿಂದ ನಿಜಕ್ಕೂ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ವರ್ಗ, ಬಂಧು-ಬಳಗದವರಿಗೆ, ಅಪಾರ ಅಭಿಮಾನಿಗಳಿಗೆ ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.