ಸಾರಾಂಶ
ಕನ್ನಡಪ್ರಭ ವಾರ್ತೆ ರಾಮನಗರಬಿಡದಿ ಸಮಗ್ರ ಉಪ ನಗರ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ಪ್ರತಿ ಎಕರೆಗೆ ನಿಯಮಗಳ ಪ್ರಕಾರ 1.50 ರಿಂದ 2.50 ಕೋಟಿ ಭೂ ಪರಿಹಾರ ನೀಡಲಾಗುವುದು. ಪರಿಹಾರ ಬೇಡ ಎನ್ನುವ ಭೂ ಮಾಲೀಕರಿಗೆ ಅಭಿವೃದ್ಧಿ ಹೊಂದಿದ ಭೂಮಿಯಲ್ಲಿ ಶೇಕಡ 50 - 50 ಹಾಗೂ ರಸ್ತೆ ಪಕ್ಕದಲ್ಲಿ ನಿರ್ಮಾಣಗೊಳ್ಳುವ ವಾಣಿಜ್ಯ ಕಟ್ಟಡಗಳಲ್ಲಿ ಶೇಕಡ 45-55ರ ಅನುಪಾತದಷ್ಟು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಡಿ.ಕೆ.ಶಿವಕುಮಾರ್ ರವರು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ಲೋಗೋ ಹಾಗೂ ಕಿರುಹೊತ್ತಿಗೆ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.ಈ ಭಾಗದಲ್ಲಿ ಭೂಮಿ ಬೆಲೆ 15 ರಿಂದ 85 ಲಕ್ಷ ರುಪಾಯಿವರೆಗೆ ಇದೆ. ಜಮೀನು ಕಳೆದುಕೊಂಡವರಲ್ಲಿ ಯಾವ ರೈತರು ಪರಿಹಾರ ಹಣ ಬೇಡ ಎನ್ನುತ್ತಾರೆ ಅವರಿಗೆ 60 -40ರ ಅನುಪಾತದಲ್ಲಿ ಅಭಿವೃದ್ಧಿ ಪಡಿಸಿದ ಭೂಮಿ ನೀಡಲು ಉದ್ದೇಶಿಸಿದ್ದೆ. ಆದರೆ, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಬಾಲಕೃಷ್ಣರವರ ಒತ್ತಾಯದ ಮೇರೆಗೆ 1.50 ರಿಂದ 2.50 ಕೋಟಿ ಭೂ ಪರಿಹಾರ ವಿತರಿಸಲು ನಿರ್ಧರಿಸಲಾಗಿದೆ. ಇದೊಂದು ಐತಿಹಾಸಿಕ ತೀರ್ಮಾನ ಎಂದರು.2013ರ ಕಾಯ್ದೆ ಅನುಸಾರ ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರ ನೀಡಲು ತೀರ್ಮಾನಿಲಾಗಿದೆ. ಜಿಲ್ಲಾಡಳಿತ ಕಾನೂನು ಮಾನದಂಡಗಳ ಆಧಾರದ ಮುಖ್ಯರಸ್ತೆ ಬಳಿ ಇರುವ ಜಮೀನಿಗೆ, ಒಳಭಾಗದಲ್ಲಿರುವ ಜಮೀನಿಗೆ ದರ ನಿಗದಿ ಮಾಡಲಿದೆ. ರೈತರಿಗೆ ಯಾವುದೇ ರೀತಿ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ ರಾಜ್ಯದ ಯಾವುದೇ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೈಗೊಳ್ಳಲಾಗದ ತೀರ್ಮಾನವನ್ನು ಇಲ್ಲಿ ಮಾಡಿದ್ದೇವೆ. ಹಣ ಪಡೆಯದೇ ಭೂಮಿಯನ್ನು ಹಂಚಿಕೊಳ್ಳುವ ರೈತರಿಗೆ 50:50 ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ಭೂಮಿಯನ್ನು ನೀಡಲಾಗುವುದು ಎಂದು ತಿಳಿಸಿದರು.ಇದರ ಜೊತೆಗೆ ಅಂತಿಮ ಅಧಿಸೂಚನೆಯ ದಿನಾಂಕದಿಂದ ಹಣಕಾಸು/ ಅಭಿವೃದ್ಧಿಪಡಿಸಿದ ಜಾಗವನ್ನು ಪರಿಹಾರ ನೀಡುವವರೆಗೆ ರೈತರ ಜೀವನೋಪಾಯಕ್ಕೆ ಪ್ರತಿ ಎಕರೆಗೆ ವಾರ್ಷಿಕ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಖುಷ್ಕಿ ಭೂಮಾಲೀಕರಿಗೆ ವಾರ್ಷಿಕವಾಗಿ 30 ಸಾವಿರ, ತರಿ ಭೂಮಾಲೀಕರಿಗೆ ವಾರ್ಷಿಕವಾಗಿ 40 ಸಾವಿರ, ಭಾಗಾಯ್ತು ಭೂ ಮಾಲೀಕರಿಗೆ ವಾರ್ಷಿಕ 50 ಸಾವಿರ ಅನುದಾನ ನೀಡಲಾಗುವುದು.
ಮೂರು ದಿನಗಳಿಂದಲೇ ಪರಿಹಾರ:ಭೂರಹಿತ ಕಾರ್ಮಿಕರಿಗೆ ಹಾಗೂ ಭೂಮಿಯ ದಾಖಲೆ ಇಲ್ಲದವರಿಗೆ ಒಂದು ನಿವೇಶನ ಹಾಗೂ ವಾರ್ಷಿಕ 25 ಸಾವಿರ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಇದೆಲ್ಲದರ ಜೊತೆಗೆ ಆದಾಯ ತೆರಿಗೆ ವಿನಾಯಿತಿ, ಮುದ್ರಾಂಕ ಶುಲ್ಕ ವಿನಾಯಿತಿ ನೀಡಲಾಗುವುದು. ಈ ನಗರಕ್ಕೆ ಕಲ್ಪಿಸಲಾಗುವ ರಸ್ತೆ ಸಂಪರ್ಕಕ್ಕೆ ಜಮೀನು ಕಳೆದುಕೊಳ್ಳುವವರಿಗೂ ಇದೇ ಮಾದರಿಯ ಪರಿಹಾರವನ್ನು ನೀಡಲಾಗುವುದು. ರೈತರು ದಾಖಲೆ ಸಮೇತ ಪರಿಹಾರಕ್ಕೆ ಅರ್ಜಿ ಹಾಕಿದರೆ, ಮೂರು ದಿನಗಳಿಂದಲೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.ಮೆಟ್ರೋ ವಿಸ್ತರಣೆ ಚಿಂತನೆ:ಈ ನಗರ ನಿರ್ಮಾಣದಿಂದ ವ್ಯಾಪಾರ ಹಾಗೂ ಆರ್ಥಿಕತೆಗೆ ಉತ್ತೇಜನ ನೀಡಲಾಗುವುದು. ಈ ನಗರದ 2 ಸಾವಿರ ಎಕರೆಗೂ ಹೆಚ್ಚಿನ ಪ್ರದೇಶವನ್ನು ಎಐ ಆಧಾರಿತ ಉದ್ದಿಮೆಯ ಜಾಗತಿಕ ಹೂಡಿಕೆದಾರರಿಗಾಗಿ ಮೀಸಲಿಡಲಾಗುವುದು. ಈ ಪಟ್ಟಣವನ್ನು ಶೂನ್ಯ ಟ್ರಾಫಿಕ್ ಜಾಮ್ ಪಟ್ಟಣವಾಗಿ ನಿರ್ಮಿಸಲು ಅನೇಕ ಯೋಜನೆ ಕೈಗೊಳ್ಳಲಾಗಿದೆ. ಈ ನಗರವು 300 ಮೀ. ಅಗಲದ ಬಿಸಿನೆಸ್ ಕಾರಿಡಾರ್ ಮೂಲಕ ಎಲ್ಲಾ ಮುಖ್ಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದರು.ಹಳ್ಳಿಗಳನ್ನು ನಗರವಾಗಿ ಅಭಿವೃದ್ಧಿ :
ಈ ಯೋಜನೆಯಲ್ಲಿ ರೈತರಿಗೂ ಸಹಭಾಗಿತ್ವ ವಹಿಸಬೇಕು ಎಂದು ತೀರ್ಮಾನಿಸಿದ್ದು, ರೈತರಿಗೆ ಉತ್ತಮ ಬೆಲೆ ಸಿಗಬೇಕು ಎಂಬುದು ನಮ್ಮ ಚಿಂತನೆ. ಈ ಅಧಿಸೂಚನೆಗೆ ಒಳಪಟ್ಟ ಪ್ರದೇಶದಲ್ಲಿರುವ ವಾಸಸ್ಥಳಗಳನ್ನು ಉಳಿಸಲಾಗುತ್ತದೆ. ಭೂಸ್ವಾಧೀನ ಮಾಡುವುದಿಲ್ಲ. ಈ 26 ಹಳ್ಳಿಗಳನ್ನು ನಗರ ರೀತಿಯಲ್ಲಿ ಅಭಿವೃದ್ಧಿಪಡಿಸುತ್ತೇವೆ ಎಂದರು.ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಶಾಸಕರಾದ ಬಾಲಕೃಷ್ಣ, ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ಎಸ್ .ರವಿ, ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ಬಿಎಂಆರ್ ಡಿಎ ಹಾಗೂ ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್ಪಿ ಶ್ರೀನಿವಾಸಗೌಡ ಇದ್ದರು.
...ಬಾಕ್ಸ್ ....ಟೌನ್‌ಶಿಪ್ ಯೋಜನೆ ಶೇ.78ರಷ್ಟು ರೈತರ ಬೆಂಬಲರಾಮನಗರ:ಬಿಡದಿ ಟೌನ್ ಶಿಪ್ ಯೋಜನೆ ತಮ್ಮ ತಕರಾರು ಇಲ್ಲ ಎಂದು ಶೇ.78ರಷ್ಟು ರೈತರು ಜಮೀನು ನೀಡಲು ಮುಂದಾಗಿದ್ದಾರೆ. ಆದರೆ, ಶೇ.18ರಷ್ಟು ರೈತರು ಮಾತ್ರ ಭೂಸ್ವಾಧೀನ ಮಾಡಬೇಡಿ ಎಂದು ಕೇಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಸ್ವಾಧೀನ ಬೇಡ ಎನ್ನುತ್ತಿರುವ ರೈತರಲ್ಲಿ ನಾನು ಇವರಿಗೆ ಕೈಮುಗಿದು ಪ್ರಾರ್ಥಿಸುತ್ತೇನೆ, ನಾನು ವೈಯಕ್ತಿಕವಾಗಿ ತೀರ್ಮಾನ ಮಾಡಲು ಸಾಧ್ಯವಿಲ್ಲ. ನಾನು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕಿದೆ ನನ್ನನ್ನು ಕ್ಷಮಿಸಿ ಎಂದರು.ಹೊಸೂರಿನಲ್ಲಿ ಸಹೋದರಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೇರಿದ 28 ಎಕರೆ ಜಮೀನು ಇದೆ. ತಮಗೆ ಭೂ ಪರಿಹಾರ ನೀಡುವಂತೆ ಅವರು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು....ಬಾಕ್ಸ್ ....ದೇಶದ ಮೊದಲ ಇಂಟೆಗ್ರೇಟೆಡ್ ಕೃತಕ ಬುದ್ಧಿಮತ್ತೆ (AI) ನಗರಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಮೂಲಕ ದೇಶದ ಮೊದಲ ಇಂಟೆಗ್ರೇಟೆಡ್ ಕೃತಕ ಬುದ್ಧಿಮತ್ತೆ (AI) ನಗರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. 9,000 ಎಕರೆಯಷ್ಟು ಪ್ರದೇಶದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಭವಿಷ್ಯದಲ್ಲಿ ಇದು ಬೆಂಗಳೂರಿನ ಕೇಂದ್ರ ವ್ಯವಹಾರ ಜಿಲ್ಲೆಯಾಗಲಿದೆ (Central Business District). ಈ ನಗರವನ್ನು ಕೆಲಸ-ವಾಸ-ಉಲ್ಲಾಸ (Work-Live-Play) ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ.
...ಬಾಕ್ಸ್ ....ಈ ಸಮಗ್ರ ಉಪನಗರಕ್ಕೆ 09 ಗ್ರಾಮಗಳ 8493 ಎಕರೆ ಪ್ರದೇಶವನ್ನು ಬಳಸಿಕೊಳ್ಳಲಾಗುತ್ತಿದ್ದು, ಇದರಲ್ಲಿ 750 ಎಕರೆ ಸರ್ಕಾರಿ ಹಾಗೂ 6731 ಎಕರೆ ಖಾಸಗಿ ಮಾಲೀಕತ್ವದ ಪ್ರದೇಶಗಳಾಗಿವೆ. ಉಳಿದ 1012 ಎಕರೆ ಪ್ರದೇಶಗಳು ಜಲ ಮೂಲ ಪ್ರದೇಶಗಳಾಗಿವೆ. ಈ ಯೋಜನೆಗಾಗಿ ಬಿಎಂಆರ್ ಡಿಎ ಮೂಲಕ 2950 ಕೋಟಿ ಹಾಗೂ ಕರ್ನಾಟಕ ಸರ್ಕಾರದ ಶ್ಯೂರಿಟಿಯೊಂದಿಗೆ ಹಣಕಾಸು ಸಂಸ್ಥೆಗಳ ಮೂಲಕ 17,500 ಕೋಟಿ ಸಂಗ್ರಹಿಸಲಾಗುವುದು. 20 ಸಾವಿರ ಕೋಟಿಗೂ ಆರ್ಥಿಕ ಸಂಪನ್ಮೂಲ ಪೂರ್ಣಗೊಂಡ ನಂತರ ಭೂಸ್ವಾಧೀನ ಪ್ರಕ್ರಿಯೆ ಪರಿಹಾರ ವಿತರಣೆ ಆರಂಭಿಸಲಾಗುವುದು. ಈ ಯೋಜನೆಗೆ ಒಳಪಡುವ ಭೂ ಮಾಲೀಕರಿಗೆ 2013ರ ಕಾಯ್ದೆಯ ಪ್ರಕಾರ ಪುನರ್ವಸತಿ ಹಾಗೂ ಪುನಶ್ಚೇತನ (R&R) ನೀತಿ ಜಾರಿಗೊಳಿಸಲಾಗಿದೆ.4ಕೆಆರ್ ಎಂಎನ್ 5.ಜೆಪಿಜಿಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.