ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಭೇಟಿ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ಅವರು ಭಾನುವಾರ ಬೀದರ್ ತಾಲೂಕಿನಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಸಂಗನಳ್ಳಿ, ಇಸ್ಲಾಂಪೂರ, ಇಮಾಮ್‌ಬಾದ್ ಹಳ್ಳಿ, ಮಾಳೆಗಾಂವ್, ಕಪಲಾಪೂರ, ಅಲಮಾಸ್‌ಪುರ, ಜಾಂಪಾಡ, ಅಲ್ಲಾಪೂರ ಹಾಗೂ ನೇಮತಾಬಾದ್ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.