ಶಿಕ್ಷಕರು ಅಭಿವೃದ್ಧಿ ರುವಾರಿಗಳು: ಪ್ರಭು ಚವ್ಹಾಣಮಕ್ಕಳಿಗೆ ವಿದ್ಯೆ, ಬುದ್ದಿ ಕಲಿಸಿ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಅಭಿವೃದ್ಧಿಯ ರುವಾರಿಗಳು ಎಂದು ಶಾಸಕ ಪ್ರಭು ಬಿ.ಚವ್ಹಾಣ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯಿಂದ ಸೆ.13ರಂದು ಔರಾದ್(ಬಿ) ಪಟ್ಟಣದ ಡಾ.ಗುರುಪಾದಪ್ಪ ಕಲ್ಯಾಣ ಮಂಟಪದಲ್ಲಿ ನಡೆದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.