ಬೀದರ್ ಮಹಾನಗರ ಪಾಲಿಕೆ ಪ್ರಸ್ತಾಪಕ್ಕೆ ಸರ್ಕಾರದ ಅಂತಿಮ ಮೊಹರುಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮತ್ತು ಹಲವು ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ, ಸಂಪುಟ ಸಭೆಗಳಲ್ಲಿ ಚರ್ಚೆಗೆ ಬಂದು ಘೋಷಣೆಯಾಗಿತ್ತಾದರೆ ನಗರಸಭೆ ವ್ಯಾಪ್ತಿಗೆ 16 ಗ್ರಾಮಗಳನ್ನು ಸೇರಿಸಿ ಮಹಾನಗರ ಪಾಲಿಕೆಯನ್ನಾಗಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.