ಇಂದಿನಿಂದ ಚನ್ನಬಸವ ಪಟ್ಟದ್ದೇವರ 25ನೆಯ ಸ್ಮರಣೋತ್ಸವವಚನ ಜಾತ್ರೆ, ಅಕ್ಕಮಹಾದೇವಿ ಜಯಂತ್ಯುತ್ಸವಕ್ಕೆ ಭರದ ಸಿದ್ಧತೆ. ಭಾಲ್ಕಿಯ ಚನ್ನಬಸವಾಶ್ರಮದಲ್ಲಿ 5 ದಿನ ನಡೆಯಲಿರುವ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ. ಈ ಐದು ದಿನದ ಐತಿಹಾಸಿಕ ಸಮಾರಂಭಕ್ಕೆ ನಾಡಿನ ಹೆಸರಾಂತ ಮಠಾಧೀಶರು, ಹಿರಿಯ ಸಾಹಿತಿಗಳು, ಬುದ್ದಿಜೀವಿಗಳು, ಕಲಾವಿದರು, ಗಣ್ಯರು ಸಾಕ್ಷಿಯಾಗಲಿದ್ದಾರೆ.