21ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಾರೋಟಿನಲ್ಲಿ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆಸಚಿವ ಈಶ್ವರ ಖಂಡ್ರೆ, ರಹೀಮ್ಖಾನ್ ಮೆರವಣಿಗೆಗೆ ಜಂಟಿಯಾಗಿ ಚಾಲನೆ ನೀಡಿದರು. ಡೊಳ್ಳು ಕುಣಿತ, ಬ್ಯಾಂಡ್, ಹಲಿಗೆ, ಕೋಲಾಟ, ಲಂಬಾಣಿ ನೃತ್ಯ ಮೊದಲಾದ ಕಲಾ ತಂಡಗಳು ಮೆರವಣಿಗೆಗೆ ಕಳೆ ನೀಡಿದವು. ಶರಣರು, ಮಹಾ ಪುರುಷರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಗಳು ಸಾರ್ವಜನಿಕರ ಗಮನ ಸೆಳೆದರು.