ಸಾರಾಂಶ
ತರೀಕೆರೆ, ಕೇಂದ್ರ ಸರ್ಕಾರದ ಅರ್ಥಮಂತ್ರಿಗಳು ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ಜನತೆಗೆ ಭಾರಿ ನಿರಾಸೆ ಉಂಟಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಲ್. ಟಿ.ಹೇಮಣ್ಣ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ, ತರೀಕೆರೆ
ಕೇಂದ್ರ ಸರ್ಕಾರದ ಅರ್ಥಮಂತ್ರಿಗಳು ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ಜನತೆಗೆ ಭಾರಿ ನಿರಾಸೆ ಉಂಟಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಲ್. ಟಿ.ಹೇಮಣ್ಣ ತಿಳಿಸಿದ್ದಾರೆ.ಇದೊಂದು ಶೂನ್ಯ ಬಜೆಟ್ ಆಗಿದೆ. ರಾಜ್ಯದ ಹಿತಾಸಕ್ತಿ ಕಾಪಾಡುವ ಮೇಕೆದಾಟು ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಅನುದಾನ ಘೋಷಣೆ ಮಾಡಿಲ್ಲ. ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಮಾತ್ರ ಕೇಂದ್ರೀಕೃತ ಮಾಡಿ ವಿಶೇಷ ರೀತಿಯಲ್ಲಿ ಅನುದಾನ ಘೋಷಣೆ ಮಾಡಿರುವುದು, ಕರ್ನಾಟಕ ಹಾಗೂ ಇತರೆ ರಾಜ್ಯಗಳಿಗೆ ಯಾವುದೇ ಅನುದಾನ ನೀಡದಿರುವುದರಿಂದ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಕಳೆದ ಫೆಬ್ರವರಿ ತಿಂಗಳಲ್ಲಿ ಘೋಷಣೆ ಮಾಡಿದ್ದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಅನುದಾನ ಕಡಿತಗೋಳಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಹವಾಮಾನ ವೈಪರೀತ್ಯದಿಂದ ಬಾರಿ ಮಳೆಯಿಂದ ಹೆದ್ದಾರಿ ಅಭಿವೃದ್ಧಿ ಯೋಜನೆಗಳಿಗೆ ಗುಡ್ಡಕೊರೆತದಿಂದ ಭಾರಿ ಅನಾಹುತ ಸಂಭವಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ತಡೆಗೋಡೆ ನಿರ್ಮಾಣ ಮಾಡಿದ್ದರೆ ಅನಾಹುತ ತಪ್ಪಿಸಬಹುದಿತ್ತು. ಇಂಥ ಸಂದರ್ಭದಲ್ಲೂ ಸಹ ಕೇಂದ್ರ ಸಚಿವರು ಅನುದಾನವನ್ನು ಬಜೆಟ್ ನಲ್ಲಿ ಘೋಷಣೆ ಮಾಡಿಲ್ಲ. ಹಾಗೆಯೇ ಹಳೆ ಶಿಥಿಲಗೊಂಡ ಅಣೆಕಟ್ಟುಗಳ ರಕ್ಷಣಾತ್ಮಕ ಕ್ರಮ ಕೈಗೊಳ್ಳಲು ಅನುದಾನದ ಬಗ್ಗೆ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ24ಕೆಟಿಆರ್.ಕೆ.6ಃ ಎಲ್.ಟಿ.ಹೇಮಣ್ಣ.