ಬಿಗ್ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ

| Published : Mar 14 2024, 02:07 AM IST

ಸಾರಾಂಶ

ತುಮಕೂರಿನಲ್ಲಿ ಶೂಟಿಂಗ್ ಮುಗಿಸಿಕೊಂಡು ತನ್ನ ಸ್ವಗ್ರಾಮ ಹೊಳೆನರಸೀಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕುಣಿಗಲ್ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ತಮ್ಮ ಕಾರ್ ನಲ್ಲಿ ಹೋಗುವಾಗ ಕುಣಿಗಲ್ ಕಡೆಯಿಂದ ಬಂದ ಆಟೋ ನಡುವೆ ಡಿಕ್ಕಿ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಕುಣಿಗಲ್ ತುಮಕೂರಿನಲ್ಲಿ ಶೂಟಿಂಗ್ ಮುಗಿಸಿಕೊಂಡು ತನ್ನ ಸ್ವಗ್ರಾಮ ಹೊಳೆನರಸೀಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕುಣಿಗಲ್ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ತಮ್ಮ ಕಾರ್ ನಲ್ಲಿ ಹೋಗುವಾಗ ಕುಣಿಗಲ್ ಕಡೆಯಿಂದ ಬಂದ ಆಟೋ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಗಾಯಗೊಂಡಿದ್ದ ಆಟೋ ಚಾಲಕನನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಜೊತೆ ತುಕಾಲಿ ಸಂತೋಷ್ ಪ್ರಯಾಣಿಸುತ್ತಿದ್ದಾಗ ಕಾರು ಹಾಗೂ ಆಟೋ ಡಿಕ್ಕಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ಚಾಲಕನಿಗೆ ಪೆಟ್ಟಾಗಿದ್ದು, ತುಕಾಲಿ ಸಂತೋಷ್ ಆಂಬುಲೆನ್ಸ್ ಗೆ ಫೋನ್ ಮಾಡಿ ಗಾಯಾಳು ವನ್ನು ಆಸ್ಪತ್ರೆಗೆ ಸೇರಿಸಿದರು ಎಂದು ಪ್ರತ್ಯಕ್ಷ ದರ್ಶಿ ರಮೇಶ್ ತಿಳಿಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.