ಸಾರಾಂಶ
ಹೊಸಕೋಟೆ: ಬಿಹಾರ ರಾಜ್ಯದಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಎನ್‌ಡಿಎ ಭರ್ಜರಿ ಗೆಲುವನ್ನು ಸಾಧಿಸಿದೆ ಎಂದು ಹೊಸಕೋಟೆ ಟೌನ್ ಬಿಜೆಪಿ ಅಧ್ಯಕ್ಷ ಬಾಲಚಂದ್ರ ತಿಳಿಸಿದರು.
ಹೊಸಕೋಟೆ: ಬಿಹಾರ ರಾಜ್ಯದಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಎನ್‌ಡಿಎ ಭರ್ಜರಿ ಗೆಲುವನ್ನು ಸಾಧಿಸಿದೆ ಎಂದು ಹೊಸಕೋಟೆ ಟೌನ್ ಬಿಜೆಪಿ ಅಧ್ಯಕ್ಷ ಬಾಲಚಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರ ಮತದಾರರು ಸಾಕಷ್ಟು ಪ್ರಬುದ್ಧತೆಯಿಂದ ಮತದಾನ ಮಾಡುವುದರ ಮೂಲಕ ಮಹಾಘಟಬಂಧನ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಹಾರ ಚುನಾವಣೆ ಫಲಿತಾಂಶ 2028ರ ರಾಜ್ಯ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದು ಅವರ ಮೇಲೆ ನಂಬಿಕೆ ಇಟ್ಟು ಯಾವುದೇ ಪುಕ್ಕಟೆ ಯೋಜನೆಗಳಿಗೆ ತಮ್ಮ ಬುದ್ಧಿಯನ್ನು ಕೊಡದೆ ಮತವನ್ನ ಚಲಾಯಿಸಿ ಅಧಿಕಾರವನ್ನು ಕೊಟ್ಟಿದ್ದಾರೆ. ಎಂದರು.ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ದೇಶದ ಎಲ್ಲಾ ರಾಜ್ಯಗಳಲ್ಲೂ ತೀವ್ರ ಮುಖಭಂಗ ಅನುಭವಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ಸಹ ತೀವ್ರ ಮುಖಭಂಗ ಅನುಭವಿಸುವುದು ನಿಶ್ಷಿತ. ಅಲ್ಲದೆ ಮತದಾರರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು ರಾಜ್ಯದಲ್ಲೂ ಸಹ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಸಂದೇಹವಿಲ್ಲ ಎಂದರು.
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೆ.ಎಂ.ಹಸೇನ್, ಮಹಿಳಾ ಮೋರ್ಚಾ ಅಧ್ಯಕ್ಷೆ ಯಶೋಧ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ್, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ಕುಮಾರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ರಾಮಾಂಜನಿ, ಮುಖಂಡರಾದ ಪಿಂಕಿ ಮುನಿರಾಜು, ಬಸವಯ್ಯ, ವಾಸು, ರಘು ಹೇಮಲತಾ, ಕಲಾವತಿ ಹಾಜರಿದ್ದರು.ಫೋಟೋ : 14 ಹೆಚ್‌ಎಸ್‌ಕೆ 05
ಹೊಸಕೋಟೆ ನಗರದ ಕನಕ ಭವನ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬಿಹಾರದಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.;Resize=(128,128))
;Resize=(128,128))
;Resize=(128,128))