ಬಿಹಾರ್ ಜಯ: ಬಿಜೆಪಿ ಮುಖಂಡರಿಂದ ಸಂಭ್ರಮ

| Published : Nov 15 2025, 01:15 AM IST

ಬಿಹಾರ್ ಜಯ: ಬಿಜೆಪಿ ಮುಖಂಡರಿಂದ ಸಂಭ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ದೇವನಹಳ್ಳಿ: ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತದಾರರು ಧೂಳಿಪಟ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ರವಿಕುಮಾರ್ ಸಂತಸ ವ್ಯಕ್ತಪಡಿಸಿದರು.

ದೇವನಹಳ್ಳಿ: ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಅತ್ಯಧಿಕ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತದಾರರು ಧೂಳಿಪಟ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ರವಿಕುಮಾರ್ ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿ ಮಾತನಾಡಿದ ಅವರು, ಬಿಹಾರ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಆ ಫಲಿತಾಂಶ ಕರ್ನಾಟಕದ ಮುಂಬರುವ ಚುನಾವಣೆಗಳ ದಿಕ್ಸೂಚಿ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದರು.

ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ ಮಾತನಾಡಿ, ರಾಜ್ಯದ ಹಾಗೂ ಅಕ್ಕಪಕ್ಕದ ರಾಜ್ಯದ ಅನೇಕ ಕಾಂಗ್ರೆಸ್ ಮುಖಂಡರು ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಬ್ಬರದ ಪ್ರಚಾರ ನಡೆಸಿದ್ದರು. ಅಲ್ಲಿನ ಜನ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಕಳೆದ ಬಾರಿಗಿಂತ ೭೦ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸುವ ಮೂಲಕ ಎನ್‌ಡಿಎಗೆ ಭರ್ಜರಿ ಬಹುಮತ ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಮುಖಂಡ ರಮೇಶ್‌ಕುಮಾರ್ ಮಾತನಾಡಿ, ಬಿಹಾರವನ್ನು ಜಂಗಲ್ ರಾಜ್ಯ ಎಂದು ಕರೆಯುತ್ತಿದ್ದರು. ಅದು ಈಗ ಯಾವ ರೀತಿ ಮುಂದುವರಿಯುತ್ತಿದೆ ಎಂದು ತೋರಿಸಲಿಕ್ಕೆ ಈ ಚುನಾವಣೆ ಫಲಿತಾಂಶ ನಿದರ್ಶನವಾಗಿದೆ. ಎನ್‌ಡಿಎ ಸರಕಾರದ ಅಭಿವೃದ್ಧಿ ಮೆಚ್ಚಿ ಆಸೆ, ಆಮಿಷಗಳಿಗೆ ಒಳಗಾಗದೆ ಜನ ಮತದಾನ ಮಾಡಿದ್ದಾರೆ ಎಂದು ತಿಳಿಸಿದರು.

ಇದೆ ವೇಳೆ ಜಿಲ್ಲಾ ಸಂಚಾಲಕಿ ನಾಗವೇಣಿ, ನಂಜೇಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ಪುನೀತ ಆರ್., ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷ ವಿಜಯ, ಸುರೇಶಾಚಾರ್, ಬಿದಲೂರು ಮುನಿಕೃಷ್ಣ (ತಮ್ಮಯ್ಯ), ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

----------------

ಬಿಹಾರ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ದೇವನಹಳ್ಳಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.