ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಹಾಗೂ ನಿತೀಶ್ ಅವರ ಆಡಳಿತಕ್ಕೆ ಎನ್‌ಡಿಎಗೆ ಲಭಿಸಿದ ಅಭೂತಪೂರ್ವ ಗೆಲುವೇ ಸಾಕ್ಷಿ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.
ಹರಿಹರ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಹಾಗೂ ನಿತೀಶ್ ಅವರ ಆಡಳಿತಕ್ಕೆ ಎನ್‌ಡಿಎಗೆ ಲಭಿಸಿದ ಅಭೂತಪೂರ್ವ ಗೆಲುವೇ ಸಾಕ್ಷಿ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಪ್ರಚಂಡ ಜಯ ಲಭಿಸಿದ ಹಿನ್ನಲೆ ಶುಕ್ರವಾರ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ವಿಜಯೋತ್ಸವದಲ್ಲಿ ಅವರು ಮಾತನಾಡಿದರು. ಎನ್‌ಡಿಎ ಮೈತ್ರಿಕೂಟದ ಸುನಾಮಿಗೆ ಮಹಾಘಟಬಂಧನ್ ಧೂಳೀಪಟವಾಗಿದೆ. ಇದಕ್ಕೆ ಮೋದಿ ನಾಯಕತ್ವವೇ ಕಾರಣ. ದೇಶಭಕ್ತ ಮತದಾರರು ಎನ್‌ಡಿಎದಿಂದ ಮಾತ್ರ ಈ ದೇಶ ರಕ್ಷಣೆ ಸಾಧ್ಯ ಎನ್ನುವುದನ್ನು ಅರಿತು ಈ ಆದೇಶ ನೀಡಿದ್ದಾರೆ. ಇದಕ್ಕಾಗಿ ಬಿಹಾರದ ಜನತೆಗೆ ಅಭಿನಂದಿಸುತ್ತೇನೆ ಎಂದರು.ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಮಾತನಾಡಿ, ಗ್ಯಾರಂಟಿ ಭರವಸೆಯಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಭ್ರಷ್ಟ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ಬಿಹಾರ ರೀತಿಯಲ್ಲಿಯೇ ತಕ್ಕ ಶಾಸ್ತ್ರಿ ಮಾಡಲಿದ್ದಾರೆ, ಕಾದು ನೋಡಿ ಎಂದರು.
ರಾಣಿ ಚೆನ್ನಮ್ಮ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಐರಣಿ, ಹರಿಹರ ಗ್ರಾಮಾಂತರ ಘಟಕ ಅಧ್ಯಕ್ಷ ಲಿಂಗರಾಜ್ ಹಿಂಡಸಘಟ್ಟ, ನಗರಾಧ್ಯಕ್ಷ ಅಜೀತ್ ಸಾವಂತ್, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪಾ ಬೂತೆ, ಎಚ್.ಮಂಜಾನಾಯ್ಕ್, ಮಾಜಿ ದೂಡಾ ಸದಸ್ಯ ಬಾತಿ ಚಂದ್ರಶೇಖರ್ ಮುಖಂಡರು, ಕಾರ್ಯಕರ್ತರು ಇದ್ದರು.- - -
* ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲವು: ಚನ್ನಗಿರಿಯಲ್ಲಿ ಸಂಭ್ರಮಚನ್ನಗಿರಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಗೆಲುವನ್ನು ಸಾಧಿಸಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿ. ಈ ಚುನಾವಣೆ ದೇಶದ ರಾಜಕಾರಣದ ದಿಕ್ಸೂಚಿಯಾಗಿದೆ ಎಂದು ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಹೇಳಿದರು. ಶುಕ್ರವಾರ ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಮೈತ್ರಿಕೂಟದ ಗೆಲುವು ಹಿನ್ನೆಲೆ ತಾಲೂಕು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಅವರು ಮಾತನಾಡಿದರು. ಭಾರತದ ಭದ್ರತೆ, ಐಕ್ಯತೆ ದೃಷ್ಠಿಯಿಂದ ಬಿಹಾರದ ಜನತೆ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ನೀಡಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು. ಬಿಜೆಪಿ ವಿಜಯೋತ್ಸವಕ್ಕೂ ಮುನ್ನ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ತಾಲೂಕು ಬಿಜೆಪಿ ಅಧ್ಯಕ್ಷ ಮಲಹಾಳ್ ಡಿ.ಸಿ. ಕುಮಾರಸ್ವಾಮಿ, ಮುಖಂಡರಾದ ಮಾಲತೇಶ್, ಹನುಮಂತ್ ಮಡಿವಾಳ್, ಅಣ್ಣಪ್ಪ, ರೂಪಾ ವೆಂಕಟೇಶ್, ಶಶಿಕಲಾ ನಾಗರಾಜ್, ಸುಣಿಗೆರೆ ಕುಮಾರ್, ಜಿ.ಚಿನ್ನಸ್ವಾಮಿ, ತುಮ್ ಕೋಸ್ ಸಂಸ್ಥೆ ಮಾಜಿ ಅಧ್ಯಕ್ಷ ಆರ್.ಎಂ.ರವಿ, ದಿಗ್ಗೇನಹಳ್ಳಿ ನಾಗರಾಜ್, ಬುಳ್ಳಿ ನಾಗರಾಜ್, ಬುಳ್ಳಿ ಗಣೇಶ್, ಕಿರಣ್ ಕೋರಿ ಪ್ರಸಾದ್, ಗಂಗಗೊಂಡನಹಳ್ಳಿ ಜಗದೀಶ್, ಕಾರ್ಯಕರ್ತರು ಭಾಗವಹಿಸಿದ್ದರು. - - - -14ಕೆಸಿಎನ್‌ಜಿ1:- - -
-14ಎಚ್‌ಆರ್‌ಆರ್08:ಹರಿಹರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
;Resize=(128,128))
;Resize=(128,128))
;Resize=(128,128))