ಬಿಹಾರ ಗೆಲುವು: ಜೆಡಿಯು ಸಂಭ್ರಮಾಚರಣೆ

| Published : Nov 16 2025, 01:15 AM IST

ಸಾರಾಂಶ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಜೆಡಿಯು ಮುಖಂಡರು ಶನಿವಾರ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ತುಮಕೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಜೆಡಿಯು ಮುಖಂಡರು ಶನಿವಾರ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾತನಾಡಿದ ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್, ಬಿಹಾರ ಚುನಾವಣೆಯ ಫಲಿತಾಂಶ ಮುಂದೆ ನಮ್ಮ ರಾಜ್ಯದಲ್ಲಿ ನಡೆಯುವ ಎಲ್ಲಾ ಚುನಾವಣೆಗಳ ದಿಕ್ಸೂಚಿಯಾಗಲಿದೆ. ಬಿಹಾರದಲ್ಲಿ ಗೆಲುವು ಸಾಧಿಸಲು ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್‌ಕುಮಾರ್‌ ಅವರಿಗೆ ಅಭಿನಂದನೆಗಳು ಎಂದು ಹೇಳಿದರು.ಈ ಚುನಾವಣೆ ಮೂಲಕ ಜೆಡಿಯುನಲ್ಲಿ ಗೆಲುವಿನ ಉತ್ಸಾಹ ಹೆಚ್ಚಿದೆ. ಮುಂಬರುವ ಆಗ್ನೇಯ ಪದವಿಧರರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್‌ ಅವರ ನೇತೃತ್ವದಲ್ಲಿ ಪಕ್ಷದ ಅಭ್ಯರ್ಥಿ ಡಾ.ನಾಗರಾಜು ಜಯಗಳಿಸಲಿದ್ದಾರೆ ಎಂಬ ವಿಶ್ವಾಸವ್ಯಕ್ತಪಡಿಸಿದರು. ಮುಖಂಡರಾದ ಪರಮೇಶ್ ಸಿಂದಗಿ, ಎಚ್.ಸಿ.ಸುರೇಶ್, ಮಂಜುನಾಥ್, ಕುದೂರು ಬಸವಣ್ಣ ಮೊದಲಾದವರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.