ನಿಂತಿದ್ದ ವಾಹನಕ್ಕೆ ಬೈಕ್ ಡಿಕ್ಕಿ-ಸವಾರ ಸಾವು | Kannada Prabha
Image Credit: KP
: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ.
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ.
ತಾಲೂಕಿನ ನರಿಕೊಂಬು ಮರ್ದೊಳಿ ನಿವಾಸಿ ಸಂತೋಷ್ ಮೃತರು. ಅವರು ಬೆಳಗ್ಗೆ ಮನೆಯಿಂದ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮರಕೂಟ್ಲು ಎಂಬಲ್ಲಿ ಟಯರ್ ಬ್ಲಾಸ್ಟ್ ಆಗಿದ್ದ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಲಾಗಿದೆ.
ಬಂಟ್ವಾಳ ಟ್ರಾಫಿಕ್ ಎಸ್ ಐ ಅದರ್ಶ್ ಅವರು ಭೇಟಿ ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.