ಸಾರಾಂಶ
ಕೊಲ್ಹಾರ: ಬೈಕ್ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಸಂಭವಿಸಿದೆ.
ಕೊಲ್ಹಾರ: ಬೈಕ್ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ವಿಠ್ಠಲ ಬಾಗವಗೋಳ (33) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಸುನೀಲ ದಾಸರ (28) ಅಶೋಕ ದಾಸರ (28) ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಿಸಲಾಗುತ್ತಿದೆ. ಇವರೆಲ್ಲರೂ ಬಾಗಲಕೋಟೆ ಜಿಲ್ಲೆಯ ವಜ್ರಮಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.