ಈತ ಬೆಂಗಳೂರಿನ ಗಾರ್ಮೆಂಟ್ಸ್ ವೊಂದರಲ್ಲಿ ಕೆಲಸ ಮಾಡುತ್ತಿದ್ದನು. ಬೆಂಗಳೂರಿನಿಂದ ಊರಿಗೆ ಬರಲೆಂದು ಶನಿವಾರ ರಾತ್ರಿ 9.30 ಬೈಕ್ ನಲ್ಲಿ ಬರುವಾಗ ತೊಣಚಿನಕುಪ್ಪೆ ಬಳಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸವಾರ ರಸ್ತೆಗೆ ಬಿದ್ದ ಪರಿಣಾಮ ಲಾರಿ ಚಕ್ರ ಹೊಟ್ಟೆಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದಾಬಸ್‍ಪೇಟೆ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ತೊಣಚಿನಕುಪ್ಪೆ ಗ್ರಾಮದ ಬೆಂಗಳೂರು- ತುಮಕೂರು ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ವೀರಸಾಗರ ಗ್ರಾಮದ ಮಧುಸೂದನ್ (20) ಮೃತಪಟ್ಟ ಬೈಕ್ ಸವಾರನಾಗಿದ್ದು, ಈತ ಬೆಂಗಳೂರಿನ ಗಾರ್ಮೆಂಟ್ಸ್ ವೊಂದರಲ್ಲಿ ಕೆಲಸ ಮಾಡುತ್ತಿದ್ದನು. ಬೆಂಗಳೂರಿನಿಂದ ಊರಿಗೆ ಬರಲೆಂದು ಶನಿವಾರ ರಾತ್ರಿ 9.30 ಬೈಕ್ ನಲ್ಲಿ ಬರುವಾಗ ತೊಣಚಿನಕುಪ್ಪೆ ಬಳಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸವಾರ ರಸ್ತೆಗೆ ಬಿದ್ದ ಪರಿಣಾಮ ಲಾರಿ ಚಕ್ರ ಹೊಟ್ಟೆಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಂತರ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನ ಪತ್ತೆಗೆ ಮುಂದಾಗಿದ್ದಾರೆ.