ತಾಳಿಕೋಟೆ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿಗೆ ಗಂಭೀರ ಗಾಯಗಳಾದ ಘಟನೆ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿ ಬುಧವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ತಾಳಿಕೋಟೆ

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿಗೆ ಗಂಭೀರ ಗಾಯಗಳಾದ ಘಟನೆ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿ ಬುಧವಾರ ನಡೆದಿದೆ.ತಾಳಿಕೋಟೆ ತಾಲೂಕಿನ ಅಸ್ಕಿ ಗ್ರಾಮದ ಲಾಲಸಾಬ ಚಂದಾಸಾಬ ಗೋಗಿ (೪೦) ಮೃತ ವ್ಯಕ್ತಿ. ಪತ್ನಿ ಆಸ್ಮಾ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಲಾಲಸಾಬ ಹಾಗೂ ಅವರ ಪತ್ನಿ ಆಸ್ಮಾ ಮಗನನ್ನು ಭೇಟಿಯಾಗಲು ಇಣಚಗಲ್‌ನ ಅಲ್ಪಸಂಖ್ಯಾತರ ಶಾಲೆಗೆ ಹೋಂಡಾ ಶೈನ್ ಬೈಕ್‌ನಲ್ಲಿ ಮುದ್ದೇಬಿಹಾಳ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾಲಸಾಬ ತಲೆ ಹಾಗೂ ಕುತ್ತಿಗೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಆಸ್ಮಾ ಅವರ ಬಲಗಾಲಿಗೆ ಗಂಭೀರ ಗಾಯವಾಗಿದ್ದು, ತಲೆಗೆ ಒಳಪೆಟ್ಟಾಗಿದೆ.ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಮಹ್ಮದಪಸಿಉದ್ದೀನ್, ಪಿಎಸ್‌ಐ ಜ್ಯೋತಿ ಖೋತ್ ಭೇಟಿ ನೀಡಿ ಪರಿಶೀಲಿಸಿದರು.