ಕಂದಕಕ್ಕೆ ಬಿದ್ದ ಬೈಕ್‌: ಇಬ್ಬರು ಸ್ಥಳದಲ್ಲಿ ಸಾವು

| Published : Nov 05 2023, 01:16 AM IST

ಸಾರಾಂಶ

ವಾಲಿಬಾಲ್ ಪಂದ್ಯಾವಳಿಗೆ ಸ್ಪರ್ಧಾಳುಗಳಾಗಿ ಭಾಗವಹಿಸಲು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು

ಕನ್ನಡಪ್ರಭ ವಾರ್ತೆ ಸೊರಬ

ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಸ್ಥಳದಲ್ಲಿಯೇ ಮೃತರಾದ ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತರು. ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ ಹೊನಲು- ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಸ್ಪರ್ಧಾಳುಗಳಾಗಿ ಭಾಗವಹಿಸಲು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ನ್ಯಾರ್ಶಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಂದಕದ ಗದ್ದೆಗೆ ಉರುಳಿದ ಪರಿಣಾಮ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಸ್ಥಳಕ್ಕೆ ಸೊರಬ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ.