ಬಂಗಾರಪೇಟೆ: ದ್ವಿಚಕ್ರ ವಾಹನ ಸವಾರರನ್ನು ತಡೆದು ₹8 ಲಕ್ಷ ದೋಚಿದ್ದ ದರೋಡೆಕೋರರನ್ನು ಪೊಲೀಸರು ಬಂಧಿಸಿ ಅವರಿಂದ ಆರುವರೆ ಲಕ್ಷ ನಗದು ಹಾಗೂ ದರೋಡೆಗೆ ಬಳಸಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ ತಿಂಗಳು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ನಿವಾಸಿ ನವೀನ್ ಕುಮಾರ್ ತನ್ನ ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಹೋಗುತ್ತಿದ್ದಾಗ, ತುಮಟಗೆರೆ ಗ್ರಾಮದ ಬಳಿ ವಾಹನವನ್ನು ಅಡ್ಡಗಟ್ಟಿ ಅವರಿಂದ 8 ಲಕ್ಷ ನಗದನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಪ್ರಕರಣವನ್ನು ಬೇಧಿಸಲು ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ವಿಶೇಷ ತಂಡ ರಚನೆ ಮಾಡಿದ್ದರು. ಈ ತಂಡವು ಕೋಡಗುರ್ಕಿ ಗ್ರಾಮದನಾಗರಾಜ, ಕುಮಾರಸ್ವಾಮಿ, ಬೆಂಗಳೂರಿನ ರಾಜಾಜಿನಗರದ ಜಗದೀಶ್, ವಿಜಯ್, ಜೀವನ್, ದಾಸರಹೊಸಹಳ್ಳಿ ಗ್ರಾಮದ ಹರೀಶ್‌ಕುಮಾರ್ ಹಾಗೂ ಶ್ರೀನಿವಾಸಪುರ ತಾಲೂಕಿನ ರಾಜೇಂದ್ರರನ್ನು ಬಂಧಿಸಿ ದರೋಡೆಗೆ ಬಳಸಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
