ಮಹಾಗಣಪತಿ ಶೋಭಾಯಾತ್ರೆಗೆ ಬೈಕ್‌ ರ್‍ಯಾಲಿ ಮೆರುಗು

| Published : Oct 06 2023, 01:09 AM IST

ಸಾರಾಂಶ

ಮಾದಾರ ಚೆನ್ನಯ್ಯ ಸ್ವಾಮಾಜಿ ಚಾಲನೆ । ಕನಕ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರದ ಬಳಿ ಮುಕ್ತಾಯ

ಮಾದರ ಚೆನ್ನಯ್ಯ ಸ್ವಾಮಾಜಿ ಚಾಲನೆ । ಕನಕ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರದ ಬಳಿ ಮುಕ್ತಾಯ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಚಿತ್ರದುರ್ಗದಲ್ಲಿ ಪ್ರತಿಷ್ಠಾಪನೆ ಮಾಡಲಾದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅಂಗವಾಗಿ ಗುರುವಾರ ನಗರದಲ್ಲಿ ಬೈಕ್ ರ್‍ಯಾಲಿ ಆಯೋಜಿಸಲಾಗಿತ್ತು. ಐದು ನೂರಕ್ಕೂ ಹೆಚ್ಚು ಯುವಕರು ಬೈಕ್ ಗಳಲ್ಲಿ ಆಗಮಿಸಿ ಪಾಲ್ಗೊಂಡರು. ಕನಕ ವೃತ್ತದಲ್ಲಿ ಮಾದಾರ ಗುರುಪೀಠದ ಬಸಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಬೈಕ್ ರ್‍ಯಾಲಿಗೆ ಚಾಲೆ ನೀಡಿದರು. ಹಿಂದೂ ಮಹಾಗಣಪತಿಯ ಸಮಿತಿಯ ಅಧ್ಯಕ್ಷ ಜಿ.ಎಂ ಸುರೇಶ್, ಸಮಿತಿಯ ಮಾರ್ಗದರ್ಶಕ ಬದ್ರಿನಾಥ್, ಬಜರಂಗದಳ ಪ್ರಾಂತ ಸಹ ಸಂಯೋಜಕರು ಪ್ರಭಜನ್, ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಕಾರ್ಯದರ್ಶಿ ಪಿ.ರುದ್ರೇಶ್ , ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್ , ಬಜರಂಗದಳ ಜಿಲ್ಲಾ ಸಂಯೋಜಕ ಸಂದೀಪ್ , ಜಿಲ್ಲಾ ಮುಖಂಡ ಅಶೋಕ್, ರಾಜೇಶ್, ನಗರ ಸಹ ಕಾರ್ಯದರ್ಶಿ ರಂಗಸ್ವಾಮಿ, ಬಜರಂಗದಳ ನಗರ ಸಂಯೋಜಕ ರಂಗಸ್ವಾಮಿ, ಗ್ರಾಮಾಂತರ ಅಧ್ಯಕ್ಷ ಶಶಿಧರ್ ಸಮಿತಿಯ ಸದಸ್ಯರಾದ ವಿಪುಲ್ ಜೈನ್, ಕಾರ್ತಿಕ್, ಅಜಿತ್ ಈ ವೇಳೆ ಉಪಸ್ಥಿತರಿದ್ದರು. ಬೈಕ್ ರ್‍ಯಾಲಿ ಕನಕ ವೃತ್ತದಿಂದ ಪ್ರಾರಂಭವಾಗಿ ಬುರುಜನಹಟ್ಟಿ, ಚಿಕ್ಕಪೇಟೆ, ದೊಡ್ಡಪೇಟೆ, ಜೋಗಿಮಟ್ಟಿ ರಸ್ತೆ, ಸ್ಟೇಡಿಯಂ ರಸ್ತೆ ಮೂಲಕ ಬಿಡಿ ರಸ್ತೆ, ಮೆದೆಹಳಿ ರಸ್ತೆ, ಜೆಸಿಆರ್ ಮುಖಾಂತರ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮುಕ್ತಾಯವಾಯಿತು. ಬಾಕ್ಸ್‌.....

ಶೋಭಾಯಾತ್ರೆಯ ಮಾರ್ಗ:

ವಿಸರ್ಜನಾ ಮೆರವಣಿಗೆಯು ಬಿ.ಡಿ ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಸಾಗಲಿದ್ದು, ಈ ವಿಸರ್ಜನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದೆ. ಹಾಗಾಗಿ ನಗರದಲ್ಲಿ ಸಂಚರಿಸಲಿರುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಸಂಚಾರ ಮಾರ್ಗ ಬದಲಾವಣೆ: ಅಕ್ಟೋಬರ್ 8ರಂದು ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವುದರಿಂದ ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಸಂಚಾರ ಸುಗಮಗೊಳಿಸುವ ದೃಷ್ಟಿಯಿಂದ 8ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಗರದ ಮುಖ್ಯರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸಲಿರುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಿದ್ದಾರೆ. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‍ನಿಂದ ಮಹಾತ್ಮ ಗಾಂಧಿ ವೃತ್ತ, ಹೊಳಲ್ಕೆರೆ ಮಾರ್ಗದ ಕಣಿವೆ ಕ್ರಾಸ್‍ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧಿಸಿದೆ. ಬೆಂಗಳೂರು, ಚಳ್ಳಕರೆ, ಹೊಸಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಭೀಮಸಮುದ್ರ ಕಡೆಯಿಂದ ಬರುವ ಎಲ್ಲಾ ಮಾದರಿಯ ಲಘು ಮತ್ತು ಭಾರಿ ವಾಹನಗಳು ಹಾಗೂ ಖಾಸಗಿ ಮತ್ತು ಕೆಎಸ್‍ಆರ್‌ಟಿಸಿ ಬಸ್‌ಗಳು ಎನ್ಎಚ್-48 ಮುಖಾಂತರ ಬಂದು ನಗರದ ಮೆದೇಹಳ್ಳಿ ರಸ್ತೆ ಮತ್ತು ಜೆಎಂಐಟಿ ವೃತ್ತದ ಮುಖಾಂತರ ನಗರಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸ್ ಸಂಚರಿಸಬೇಕು. ಮದ್ಯ ಮಾರಾಟ ನಿಷೇಧ: ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ ಅಕ್ಟೋಬರ್ 8 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ 10 ಕಿಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.